HomeKarnatakaಭೀಮನ ಹತ್ತಿರ ಹೋಗಿ ಫೋಟೋ, ವಿಡಿಯೋ ಮಾಡಿದ್ರೆ ಕೇಸ್‌

ಭೀಮನ ಹತ್ತಿರ ಹೋಗಿ ಫೋಟೋ, ವಿಡಿಯೋ ಮಾಡಿದ್ರೆ ಕೇಸ್‌

ಹಾಸನ ಜಿಲ್ಲೆಯ ಮಲೆನಾಡು ಭಾಗದ ಗ್ರಾಮಗಳಿಗೆ ಕಾಡಾನೆ ‘ಭೀಮ’ ಎಂಟ್ರಿ ಕೊಡುತ್ತಿದೆ. ಶಾಂತ ಸ್ವಭಾವದ ಭೀಮನನ್ನು ನೋಡಲು ಜನರು ಮುಗಿಬೀಳುತ್ತಿದ್ದಾರೆ. ಅಲ್ಲದೇ ಫೋಟೋ ತೆಗೆಯಲು, ವಿಡಿಯೋ ಮಾಡಲು ಮುಂದಾಗುತ್ತಿದ್ದಾರೆ. ಜನರ ನಡೆಯಿಂದ ಆನೆಗೆ ತೊಂದರೆ ಆಗುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕ್ರಮಕ್ಕೆ ಮುಂದಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಡಿಎಫ್‌ಓ ಸೌರಬ್‌ ಕುಮಾರ್‌ ಅವರು ಕಾಡಾನೆ ಭೀಮ ಗ್ರಾಮ ಹಾಗೂ ತೋಟಗಳಿಗೆ ಬರುತ್ತಿದೆ. ಇಟಿಎಫ್‌ ತಂಡ 24 ಗಂಟೆಗಳ ಕಾಲ ಕಾಡಾನೆ ಭೀಮನನ್ನು ಗಮನಿಸುತ್ತಿದೆ.

ಈಗಾಗಲೇ ಸಾರ್ವಜನಿಕರಿಗೆ ವಿನಂತಿ ಮಾಡಿ ಎಚ್ಚರಿಕೆ ಕೊಡಲಾಗಿದೆ. ಸೆಕ್ಷನ್‌ 216, ವೈಲ್ಡ್‌ ಲೈಫ್‌ ಪ್ರೊಟೆಕ್ಷನ್‌ ಆಕ್ಟ್‌ 19/70 ಪ್ರಕಾರ ಪ್ರಾಣಿಗಳಿಗೆ ತೊಂದರೆ ನೀಡುವುದು ಅಪರಾಧವಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಯವಿಟ್ಟು ಕಾಡು ಪ್ರಾಣಿಗಳ ಹತ್ತಿರ ಯಾರೂ ಹೋಗಬಾರದು. ನಿಮ್ಮ ಪ್ರಾಣವನ್ನು ನೀವೇ ರಕ್ಷಣೆ ಮಾಡಿಕೊಳ್ಳಬೇಕಿದೆ. ಕಾಡು ಪ್ರಾಣಿ ಕಾಡು ಪ್ರಾಣಿನೇ. ಹೀಗಾಗಿ ಜನ ಅನಾವಶ್ಯಕವಾಗಿ ಆನೆಗೆ ತೊಂದರೆ ಕೊಡಬಾರದು ಎಂದು ಹೇಳಿದ್ದಾರೆ.

ಇನ್ನು ಮುಂದೆ ಭೀಮನ ಸಮೀಪ ಹೋಗಿ ವಿಡಿಯೋ ಚಿತ್ರೀಕರಣ ಮಾಡಿದರೆ ವನ್ಯಜೀವಿ ಸಂರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular