HomeKarnatakaBIG NEWS : 'ಮಕ್ಕಳಿಗೆ ಹೊಡೆದು ಪಾಠ ಕಲಿಸುವುದನ್ನು ಸಹಿಸುವುದಿಲ್ಲ' : ಶಿಕ್ಷಕಿಗೆ ಕರ್ನಾಟಕ ಹೈಕೋರ್ಟ್‌...

BIG NEWS : ‘ಮಕ್ಕಳಿಗೆ ಹೊಡೆದು ಪಾಠ ಕಲಿಸುವುದನ್ನು ಸಹಿಸುವುದಿಲ್ಲ’ : ಶಿಕ್ಷಕಿಗೆ ಕರ್ನಾಟಕ ಹೈಕೋರ್ಟ್‌ ತರಾಟೆ

ಬೆಂಗಳೂರು : ಮಕ್ಕಳಿಗೆ ಹೊಡೆದು ಪಾಠ ಕಲಿಸುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ಕರ್ನಾಟಕ ಹೈಕೋರ್ಟ್, ಎಲ್ಕೆಜಿ ವಿದ್ಯಾರ್ಥಿನಿಗೆ ಕೋಲಿನಿಂದ ಹೊಡೆದ ಆರೋಪ ಎದುರಿಸುತ್ತಿರುವ ಸುರತ್ಕಲ್ನ ಹೋಲಿ ಫ್ಯಾಮಿಲಿ ಶಾಲೆಯ ಶಿಕ್ಷಕಿ ಆಶಾ ಕ್ರಾಸ್ತಾ ವಿರುದ್ಧ ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿದೆ.

LKG ವಿದ್ಯಾರ್ಥಿನಿಗೆ ಕೋಲಿನಿಂದ ಹೊಡೆದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾದ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಸುರತ್ಕಲ್ನ ಹೋಲಿ ಫ್ಯಾಮಿಲಿ ಶಾಲೆಯ ಶಿಕ್ಷಕಿ ಆಶಾ ಕ್ರಾಸ್ತಾ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಮಹತ್ವದ ಆದೇಶ ನೀಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸುತ್ತಿದ್ದಾಗ ನ್ಯಾಯಪೀಠ, “ಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವ ಅಗತ್ಯವೇ ಇಲ್ಲ, ಇಂತಹ ಕೃತ್ಯವನ್ನು ನ್ಯಾಯಾಲಯ ಸಹಿಸುವುದಿಲ್ಲ” ಎಂದು ಖಡಕ್ವಾಗಿ ಹೇಳಿತು.ಈ ಹಿನ್ನೆಲೆಯಲ್ಲಿ, ಮಂಗಳೂರಿನ 2ನೇ ಜೆಎಂಎಫ್ಸಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿತು. ಜೊತೆಗೆ, ಸುರತ್ಕಲ್ ಪೊಲೀಸ್ ಠಾಣಾಧಿಕಾರಿ ಹಾಗೂ ದೂರುದಾರೆಯಾಗಿರುವ ಮಗುವಿನ ತಾಯಿ ಶ್ರಫೀನಾಗೆ ನೋಟಿಸ್ ಜಾರಿ ಮಾಡಿ ಮುಂದಿನ ವಿಚಾರಣೆಯನ್ನು ಮುಂದೂಡಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣದ ಹಿನ್ನೆಲೆ
ಮಗುವಿನ ತಾಯಿ ಶ್ರಫೀನಾ ಅವರು 2026ರ ಜನವರಿ 31ರಂದು ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿ, ತಮ್ಮ 6 ವರ್ಷದ ಮಗಳು ಸುರತ್ಕಲ್ನ ಹೋಲಿ ಫ್ಯಾಮಿಲಿ ಶಾಲೆಯಲ್ಲಿ ಎಲ್ಕೆಜಿ ಓದುತ್ತಿದ್ದು, ತರಗತಿ ವೇಳೆ ಶಿಕ್ಷಕಿ ಆಶಾ ಕ್ರಾಸ್ತಾ ಮಗುವಿಗೆ ಹೊಡೆದಿದ್ದಾರೆ ಎಂದು ಆರೋಪಿಸಿದ್ದರು.ಈ ಘಟನೆ ಬಳಿಕ ಶಾಲೆಯ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ಮಧ್ಯಸ್ಥಿಕೆ ವಹಿಸಿ ವಿಷಯವನ್ನು ಬಗೆಹರಿಸಿದ್ದರೂ, 2026ರ ಜನವರಿ 30ರಂದು ಮತ್ತೆ ಮಗುವಿಗೆ ಕೋಲಿನಿಂದ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಶಿಕ್ಷಕಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೋಷಕರು ಮನವಿ ಮಾಡಿದ್ದರು.

ದೂರಿನ ಆಧಾರದ ಮೇಲೆ ಸುರತ್ಕಲ್ ಪೊಲೀಸರು ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆಯ ಸೆಕ್ಷನ್ 75 (ಮಕ್ಕಳ ಮೇಲಿನ ಕ್ರೌರ್ಯ) ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 118(1) (ದೈಹಿಕ ನೋವು ಅಥವಾ ಗಾಯ ಉಂಟುಮಾಡುವುದು) ಅಡಿಯಲ್ಲಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸಿದ್ದರು. ಬಳಿಕ ಆರೋಪಪಟ್ಟಿಯನ್ನು ಮಂಗಳೂರಿನ 2ನೇ ಹೆಚ್ಚುವರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಈ ವಿಚಾರಣೆಯನ್ನು ರದ್ದುಪಡಿಸುವಂತೆ ಶಿಕ್ಷಕಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರೂ, ವಿಚಾರಣೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದ್ದು, ಮಕ್ಕಳ ಮೇಲಿನ ದೈಹಿಕ ಶಿಕ್ಷೆಯನ್ನು ಸಹಿಸಲಾಗುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ನೀಡಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular