ಚಾಂಪಿಯನ್ಸ್ ಟ್ರೋಫಿ ಗೆಲುವಿನ ಬೆನ್ನಲ್ಲೇ ರೋಹಿತ್ ಶರ್ಮಾ ನಿವೃತ್ತಿ ಘೋಷಣೆ ಚರ್ಚೆ: ಹೀಗಿದೆ ಅವರ ಪ್ರತಿಕ್ರಿಯೆ

ದುಬೈ: ಭಾನುವಾರ ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಗೆಲ್ಲಲು ಭಾರತ ತಂಡವನ್ನು ಮುನ್ನಡೆಸಿದ ನಂತರ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುವ ಬಗ್ಗೆ ಬಂದಿರುವ ಮಾತುಗಳನ್ನು ಭಾರತದ ನಾಯಕ ರೋಹಿತ್ ಶರ್ಮಾ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.

ಫೈನಲ್ ಪಂದ್ಯದ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಭವಿಷ್ಯದ ಯೋಜನೆಗಳ ಬಗ್ಗೆ ಕೇಳಿದಾಗ ಅವರು ಅದನ್ನೇ ದೃಢಪಡಿಸಿದರು.

ಭವಿಷ್ಯದ ಯೋಜನೆಗಳು ಭವಿಷ್ಯದಲ್ಲಿ ಬರುತ್ತವೆ. ಸದ್ಯಕ್ಕೆ ಎಲ್ಲವೂ ಹಾಗೆಯೇ ಮುಂದುವರಿಯುತ್ತದೆ ಎಂದು 37 ವರ್ಷದ ಆಟಗಾರ ರೋಹಿತ್ ಎಲ್ಲಾ ವರದಿಗಳನ್ನು ತಳ್ಳಿಹಾಕಿದ್ದು, ನಿವೃತ್ತಿ ಹೊಂದುವುದಿಲ್ಲ ಎಂದು ಹೇಳಿಕೊಂಡರು.

ಮುಂದೆ ಯಾವುದೇ ವದಂತಿಗಳು ಹರಡದಂತೆ ನೋಡಿಕೊಳ್ಳಲು ನಾನು ಈ ಸ್ವರೂಪದಿಂದ ನಿವೃತ್ತಿ ಹೊಂದುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಮೂಲಕ ನಿವೃತ್ತಿ ವದಂತಿಗೆ ತೆರೆ ಎಳೆದಿದ್ದು, ನಾನು ನಿವೃತ್ತಿ ಹೊಂದುವುದಿಲ್ಲ. ಸದ್ಯ ನನಗೆ ಭವಿಷ್ಯದ ಬಗ್ಗೆ ಯಾವುದೇ ಚಿಂತೆ ಇಲ್ಲ. ನಾನು ಯಾವುದೇ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳಿಲ್ಲ. ವದಂತಿ ಹರಡಬಾರದು ಎಂದು ಈ ಸ್ಪಷ್ಟನೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read