ಎಲ್ಲಾ ಸಮೀಕ್ಷೆ ಉಲ್ಟಾ, ಮೋದಿ ಮತ್ತೆ ಪ್ರಧಾನಿಯಾದರೆ ತಲೆ ಬೋಳಿಸುವೆ: ಆಪ್ ನಾಯಕ ಸೋಮನಾಥ್ ಭಾರ್ತಿ

ನವದೆಹಲಿ: ಬಿಜೆಪಿ ಗೆಲುವಿನ ಮುನ್ಸೂಚನೆ ನೀಡುವ ವಿವಿಧ ಎಕ್ಸಿಟ್ ಪೋಲ್‌ ಗಳ ಮಾಹಿತಿ ಅಲ್ಲಗಳೆದ ಆಮ್ ಆದ್ಮಿ ಪಕ್ಷದ ನಾಯಕ ಸೋಮನಾಥ್ ಭಾರ್ತಿ, ಜೂನ್ 4ರಂದು ಎಲ್ಲಾ ಸಮೀಕ್ಷೆ ಉಲ್ಟಾ ಆಗಲಿದೆ. ಮೋದಿ ಮೂರನೇ ಬಾರಿಗೆ ಪ್ರಧಾನಿ ಆದರೆ ತಲೆ ಬೋಳಿಸಿಕೊಳ್ಳುತ್ತೇನೆ. ನರೇಂದ್ರ ಮೋದಿ ಪ್ರಧಾನಿಯಾಗುವುದಿಲ್ಲ, ದೆಹಲಿಯ ಎಲ್ಲಾ 7 ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ ಎಂದು ಹೇಳಿದ್ದಾರೆ.

ಬಿಜೆಪಿ, ಎನ್.ಡಿ.ಎ. ಅಧಿಕಾರಕ್ಕೇರುವುದಾಗಿ ಹೇಳಿರುವ ಸಮೀಕ್ಷೆಗಳನ್ನು ತಿರಸ್ಕರಿಸಿದ ಅವರು, ಮೋದಿ ಮೂರನೇ ಬಾರಿಗೆ ಪ್ರಧಾನಿಯಾದರೆ ನಾನು ನನ್ನ ತಲೆ ಬೋಳಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

“ಮೋದಿ ಮೂರನೇ ಬಾರಿಗೆ ಪ್ರಧಾನಿಯಾದರೆ ನಾನು ನನ್ನ ತಲೆಯನ್ನು ಬೋಳಿಸಿಕೊಳ್ಳುತ್ತೇನೆ. ನನ್ನ ಮಾತನ್ನು ಗಮನಿಸಿ! ಜೂನ್ 4 ರಂದು ಎಲ್ಲಾ ಎಕ್ಸಿಟ್ ಪೋಲ್‌ಗಳು ತಪ್ಪಾಗುತ್ತವೆ ಮತ್ತು ಮೂರನೇ ಬಾರಿಗೆ ಮೋದಿ ಜಿ ಪ್ರಧಾನಿಯಾಗುವುದಿಲ್ಲ. ದೆಹಲಿಯ ಎಲ್ಲಾ 7 ಸೀಟುಗಳು ಇಂಡಿಯಾ ಮೈತ್ರಿಕೂಟ ಪಾಲಾಗುತ್ತವೆ, ಆದ್ದರಿಂದ ನಾವು ಜೂನ್ 4 ರಂದು ನೀಡಲಾಗುವ ನಿಜವಾದ ಫಲಿತಾಂಶಗಳಿಗಾಗಿ ಕಾಯಬೇಕಾಗಿದೆ. ಜನ ಬಿಜೆಪಿ ವಿರುದ್ಧ ಭಾರಿ ಮತ ಹಾಕಿದ್ದಾರೆ ಎಂದು ತಿಳಿಸಿದ್ದಾರೆ.

https://twitter.com/attorneybharti/status/1796906053587873817

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read