ಇಂದು ಮಹಿಳಾ ಏಷ್ಯಾ ಕಪ್ ನ ಮೊದಲ ಪಂದ್ಯದಲ್ಲಿ ಈಗಾಗಲೇ ಪಾಕಿಸ್ತಾನ ಹಾಗೂ ಯುಎಇ ತಂಡ ಮುಖಾಮುಖಿಯಾಗಿದ್ದು, ಮತ್ತೊಂದು ಪಂದ್ಯದಲ್ಲಿ ಭಾರತ ಹಾಗೂ ನೇಪಾಳ ಸೆಣಸಾಡಲಿವೆ. ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರ ದಾಖಲೆಯನ್ನು ಮುರಿಯುವ ಲೆಕ್ಕಾಚಾರದಲ್ಲಿದ್ದಾರೆ.
ಅಂತರಾಷ್ಟ್ರೀಯ ಮಹಿಳಾ ಟಿ ಟ್ವೆಂಟಿ ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಬಾರಿಸಿರುವವರ ಪಟ್ಟಿಯಲ್ಲಿ ಭಾರತೀಯ ಆಟಗಾರ್ತಿಯಾದ ಹರ್ಮನ್‌ಪ್ರೀತ್ ಕೌರ್ ಎರಡನೇ ಸ್ಥಾನದಲ್ಲಿದ್ದರೆ, ಸ್ಮೃತಿ ಮಂದಾನ ನಾಲ್ಕನೇ ಸ್ಥಾನದಲ್ಲಿದ್ದಾರೆ. ಹರ್ಮನ್‌ಪ್ರೀತ್ ಕೌರ್ ಒಟ್ಟಾರೆ ಟಿ ಟ್ವೆಂಟಿ ಕ್ರಿಕೆಟ್ನಲ್ಲಿ 3415 ರನ್ ಸಿಡಿಸಿದ್ದು, ಸ್ಮೃತಿ ಮಂದಾನ 3378 ರನ್ ಗಳಿಸುವ ಮೂಲಕ ಕೇವಲ 37 ರನ್ಗಳ ಅಂತರದಿಂದ ತಮ್ಮ ನಾಯಕಿಯ ಹಿಂದೆಯೇ ಇದ್ದಾರೆ. ಇಂದಿನ ಪಂದ್ಯದಲ್ಲಿ ಸ್ಮೃತಿ ಮಂದಾನ ಈ ದಾಖಲೆಯನ್ನು ಹಿಂದಿಕ್ಕಲಿದ್ದಾರಾ ಕಾದುನೋಡಬೇಕಾಗಿದೆ.