HomeKarnatakaBREAKING NEWS: ಮೇಲ್ಸೇತುವೆ ಮೇಲಿಂದ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ವ್ಯಕ್ತಿ; ಸ್ಥಳದಲ್ಲೇ ದುರ್ಮರಣ

BREAKING NEWS: ಮೇಲ್ಸೇತುವೆ ಮೇಲಿಂದ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ವ್ಯಕ್ತಿ; ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಮೇಲ್ಸೇತುವೆ ಮೇಲಿಂದ ವ್ಯಕ್ತಿಯೋರ್ವ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದಿದ್ದು, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವಿಂಡ್ಸರ್ ಮ್ಯಾನರ್ ಬ್ರಿಡ್ಜ್ ಬಳಿ ನಡೆದಿದೆ.

ಅಪರಿಚಿತ ವ್ಯಕ್ತಿಯೋರ್ವ ಏಕಾಏಕಿ ವಿಂಡ್ಸರ್ ಮ್ಯಾನರ್ ಸೇತುವೆ ಮೇಲಿನಿಂದ ಕಾರಿನ ಮೇಲೆ ಬಿದ್ದಿದ್ದಾನೆ. ವ್ಯಕ್ತಿ ಬಿದ್ದ ರಭಸಕ್ಕೆ ಚಲಿಸುತ್ತಿದ್ದ ಕಾರಿನ ಗಾಜು ಪುಡಿ ಪುಡಿಯಾಗಿದೆ. ಕೆಳಗೆ ಬಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೇಲ್ಸೇತುವೆ ಮೇಲಿಂದ ವ್ಯಕ್ತಿ ಬೀಳಲು ಕಾರಣವೇನು? ಇದು ಆತ್ಮಹತ್ಯೆಯೋ, ಕೊಲೆಯೋ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular