ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 8 ರಿಂದ 10 ದಿನಗಳ ಕಾಲ ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಈ ಹಿನ್ನೆಲೆ ಸುವರ್ಣಸೌಧ ವಿಧಾನಸೌಧದ ಸುತ್ತಾಮುತ್ತಾ 3 ಕಿಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಡಿಸೆಂಬರ್ 8 ರಿಂದ 10 ದಿನ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ . ಡಿಸೆಂಬರ್ 8 ರಿಂದ 19 ರವರೆಗೆ ಚಳಿಗಾಲದ ಅಧಿವೇಶನ ನಡೆಯಲಿದೆ.
ಅಧಿವೇಶನದ ವೇಳೆ 6 ರಿಂದ 8 ಸಾವಿರ ಪೊಲೀಸರನ್ನ ಭದ್ರತೆಗಾಗಿ ಸರ್ಕಾರ ನಿಯೋಜಿಸಲಿದೆ. ದೆಹಲಿಯಲ್ಲಿ ಸಂಭವಿಸಿದ ಸ್ಪೋಟದ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ಸಂದೇಶ ನೀಡಿದ್ದು, ಜಿಲ್ಲಾಡಳಿತ ಹಾಗೂ ಪೊಲೀಸರು ಹೈ ಅಲರ್ಟ್ ಆಗಿದೆ.
