ಬೆಳಗಾವಿಯಲ್ಲಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಪ್ರಗತಿಗೆ ಒತ್ತು; ಸ್ಪೀಕರ್ ಯು.ಟಿ. ಖಾದರ್

ಮಂಗಳೂರು: ರಾಜ್ಯ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ 19 ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.

ಅವರು ಗುರುವಾರ ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಇರುವುದರಿಂದ ಅಧಿವೇಶನವನ್ನು ಡಿಸೆಂಬರ್ 19 ಕ್ಕೆ ಮುಕ್ತಾಯಗೊಳಿಸಲು ಸರ್ಕಾರವು ನಿರ್ಧರಿಸಿದೆ. ಅಧಿವೇಶನ ಮುಂದುವರಿಸುವ ಕುರಿತು ಡಿಸೆಂಬರ್ 9ರಂದು ಸ್ಪೀಕರ್ ಅಧ್ಯಕ್ಷತೆಯಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಕಾನೂನು ಸಚಿವರು, ಎಲ್ಲಾ ರಾಜಕೀಯ ಮುಖಂಡರು, ವಿರೋಧ ಪಕ್ಷದ ಮುಖಂಡರು  ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಅಧಿವೇಶನದಲ್ಲಿ ರಾಜ್ಯದ ಅಭಿವೃದ್ಧಿ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ಚರ್ಚೆಯಾಗಬೇಕಿದೆ.  ಇದರಿಂದ ಆ ಭಾಗದ ಜನರ ಭಾವನೆಗಳನ್ನು ಗೌರವಿಸಿದಂತಾಗುತ್ತದೆ. ಈ ನಿಟ್ಟಿನಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಫಕ್ಷ ಸಹಕರಿಸಬೇಕು ಎಂದು ಸ್ಪೀಕರ್ ಮನವಿ ಮಾಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read