HomeLatest Newsಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಾಸ್: ಸಿಎಂ ಸಿದ್ಧರಾಮಯ್ಯ ಘೋಷಣೆ

ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಾಸ್: ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು: ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್ ತಗೊತೀವಿ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ.

ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರರು. ದೇವರಾಜ ಅರಸು ಅವರು ಮಂತ್ರಿ ಸ್ಥಾನ ಕೊಡ್ತೀನಿ ಎಂದು ಕರೆದರೂ ಕನ್ನಡ ಪಕ್ಷ ಮತ್ತು ಕನ್ನಡ ಹೋರಾಟ ಬಿಡಲು ವಾಟಾಳ್ ಅವರು ಒಪ್ಪಲಿಲ್ಲ. ನಾವೆಲ್ಲರೂ ಕನ್ನಡ ನೆಲ, ಜಲ, ಭಾಷೆ, ಸಂಸ್ಕೃತಿ ಬಗ್ಗೆ ಅಭಿಮಾನ, ಪ್ರೀತಿ ಬೆಳೆಸಿಕೊಳ್ಳಬೇಕು. ನಮ್ಮ ನೆಲದಲ್ಲಿ ಕನ್ನಡದ ವಾತಾವರಣ ಬೆಳೆಸಬೇಕು‌. ಇದಕ್ಕಾಗಿ ಯಾರು ಯಾವುದೇ ಭಾಷೆಯಲ್ಲಿ ಮಾತನಾಡಿದರೂ ನೀವು ಕನ್ನಡದಲ್ಲೇ ಉತ್ತರ ಕೊಡಬೇಕು. ಕನ್ನಡ ನೆಲದಲ್ಲಿ ಬದುಕು ಕಟ್ಟಿಕೊಂಡ  ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಗೌರವಿಸುತ್ತಾರೆ. ಕನ್ನಡ ನೆಲದಲ್ಲಿ ನಾವು ಕನ್ನಡದಲ್ಲೇ ಮಾತಾಡುತ್ತೇವೆ ಎನ್ನುವ ಶಪಥ ಮಾಡೋಣ. ನಮ್ಮ ಭೂಮಿ, ನಮ್ಮ ನೆಲ, ನಮ್ಮ ಜಲ, ನಮ್ಮ ಭಾಷೆ ಎನ್ನುವ ಅಭಿಮಾನ ಮೂಡಲಿ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೈಸೂರು ವಿಶ್ವ ವಿದ್ಯಾಲಯದಿಂದ ದೇವರಾಜು ಅರಸು ಅವರಿಗೆ ಮರಣೋತ್ತರ ಡಾಕ್ಟರೇಟ್ ಪ್ರಶಸ್ತಿ ನೀಡಬೇಕು ಎನ್ನುವ ವಾಟಾಳ್ ನಾಗರಾಜ್ ಮತ್ತು ಸಾ.ರಾ. ಗೋವಿಂದು ಅವರ ಬೇಡಿಕೆಗೆ ವಿಚಾರವಾಗಿ ಸಿಂಡಿಕೇಟ್ ಸದಸ್ಯರ ಜೊತೆ ಚರ್ಚಿಸಲಾಗುವುದು. ಇಲ್ಲಿಯವರೆಗೂ ಅರಸು ಅವರಿಗೆ ಡಾಕ್ಟರೇಟ್ ಏಕೆ ಕೊಟ್ಟಿಲ್ಲ ಎಂದು ಶಾಕ್ ಆಗಿದೆ. ಈ ಬಗ್ಗೆ ಗಮನ ಹರಿಸ್ತೀನಿ. ಮೈಸೂರು ವಿವಿಯಲ್ಲಿ ನನಗೆ ಹಿಂದೆಯೇ ಡಾಕ್ಟರೇಟ್ ಕೊಡ್ತೀವಿ ಎಂದಿದ್ದರು. ಆದರೆ ನಾನು ಪಡೆಯಲಿಲ್ಲ. ಬೇಡ ಅಂದೆ. ಓದಿ, ಜ್ಞಾನ ವಿಸ್ತಾರ ಮಾಡಿಕೊಂಡು ಡಾಕ್ಟರೇಟ್ ಪಡೆಯಬೇಕು ಎನ್ನುವುದು ನನ್ನ ವೈಯುಕ್ತಿಕ ಭಾವನೆ ಎಂದು ಹೇಳಿದ್ದಾರೆ.

ನಾನು ವೈಯುಕ್ತಿಕವಾಗಿ ದ್ವಿಭಾಷಾ ಪರವಾಗಿ ಇದ್ದೇನೆ. ಆದರೆ ದ್ವಿಭಾಷಾ ನೀತಿಯಾಗಿ ಕಾನೂನು ಜಾರಿ ಆಗಬೇಕಾದರೆ ಕ್ಯಾಬಿನೆಟ್ ನಲ್ಲಿ ಚರ್ಚಿಸಬೇಕಾಗುತ್ತದೆ. MES ನವರೂ ಕನ್ನಡಿಗರೇ. ಅವರಲ್ಲಿ ಯಾರಾದರೂ ಪುಂಡಾಟಿಕೆ ಮಾಡಿದರೆ ಅದನ್ನು ಮಟ್ಟಹಾಕ್ತೀವಿ. ಗಡಿ ಭಾಗದ ಕನ್ನಡ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಇರುವುದನ್ನೆಲ್ಲಾ ಮಾಡಲು ಸರ್ಕಾರ ಸಿದ್ದವಿದೆ. ಬೆಳಗಾವಿ ವಿಚಾರದಲ್ಲಿ ರಾಜಿ ಇಲ್ಲ. ಮಹಾಜನ್ ವರದಿಯೇ ಅಂತಿಮ. ಬೆಳಗಾವಿ ಕನ್ನಡದ ನೆಲ, ಕರ್ನಾಟಕದ ಭಾಗ. ಇದನ್ನು ಅಲ್ಲಗಳೆಯಲು ಯಾರಿಂದಲೂ ಸಾಧ್ಯವಿಲ್ಲ. ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್ ತಗೊತೀವಿ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular