HomeKarnatakaನೀರಿಲ್ಲದೆ ಪರದಾಟ: ಜಿಮ್ಸ್ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಿಗೆ ಒಂದು ವಾರ ರಜಾ

ನೀರಿಲ್ಲದೆ ಪರದಾಟ: ಜಿಮ್ಸ್ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಿಗೆ ಒಂದು ವಾರ ರಜಾ

ತುಂಗಭದ್ರಾ ನದಿ ಬತ್ತಿ ಹೋಗಿರುವ ಹಿನ್ನೆಲೆಯಲ್ಲಿ ಗದಗಿನ ಜಿಮ್ಸ್ ವೈದ್ಯಕೀಯ ಕಾಲೇಜು ಹಾಸ್ಟೆಲ್ ಹಾಗೂ ಸಿಬ್ಬಂದಿ ಕ್ವಾರ್ಟರ್ಸ್ ಗೆ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ ಎಂದು ಹೇಳಲಾಗಿದ್ದು ಹೀಗಾಗಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಪರದಾಡುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ, ಒಂದು ವಾರ ಕಾಲ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿದ್ದು, ಸಮರ್ಪಕವಾಗಿ ನೀರು ಪೂರೈಕೆ ಮಾಡಲು ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದೆ.

ಗದಗಿನ ಹೊರ ವಲಯದಲ್ಲಿರುವ ಜಿಮ್ಸ್ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಹಾಗೂ ಕ್ವಾರ್ಟರ್ಸ್ ಗಳಿಗೆ ನೀರು ಪೂರೈಕೆಯಾಗುತ್ತಿಲ್ಲವಾದ ಕಾರಣ ವೈದ್ಯಕೀಯ ಸಿಬ್ಬಂದಿ ಸ್ವಂತ ವೆಚ್ಚದಿಂದಲೇ ಟ್ಯಾಂಕರ್ ತರಿಸಿಕೊಳ್ಳುತ್ತಿದ್ದರು. ಇಷ್ಟಾದರೂ ಆಡಳಿತ ಮಂಡಳಿ ನಿಗಾ ವಹಿಸುತ್ತಿಲ್ಲವೆಂದು ಅಸಮಾಧಾನ ವ್ಯಕ್ತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular