HomeKarnatakaಮೈಸೂರು-ಕೆಎಸ್ಆರ್ ಬೆಂಗಳೂರು ಒಡೆಯರ್ ಎಕ್ಸ್‌ಪ್ರೆಸ್‌ ರೈಲಿಗೆ ಹೊಸ ನಿಲುಗಡೆ

ಮೈಸೂರು-ಕೆಎಸ್ಆರ್ ಬೆಂಗಳೂರು ಒಡೆಯರ್ ಎಕ್ಸ್‌ಪ್ರೆಸ್‌ ರೈಲಿಗೆ ಹೊಸ ನಿಲುಗಡೆ

ರಾಮನಗರ (ಬೆಂಗಳೂರು ದಕ್ಷಿಣ) ಜಿಲ್ಲೆಯ ಜನರಿಗೆ ಭಾರತೀಯ ರೈಲ್ವೆ ಸಿಹಿಸುದ್ದಿ ನೀಡಿದೆ. ಮೈಸೂರು ಮತ್ತು KSR ಬೆಂಗಳೂರು ನಡುವೆ ಸಂಚಾರ ನಡೆಸುವ ಒಡೆಯರ್ ಎಕ್ಸ್‌ಪ್ರೆಸ್‌ ರೈಲು ಇನ್ನು ಮುಂದೆ ರಾಮನಗರದಲ್ಲಿ ನಿಲ್ಲಲಿದೆ.

ಈ ಕುರಿತು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ಈ ನಿಲುಗಡೆಗೆ ಅನುಮೋದನೆ ನೀಡಿದ ಕೇಂದ್ರದ ರೇಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್‌ ಅವರಿಗೆ ಹೃದಯಪೂರ್ವಕ ಧನ್ಯವಾದಗಳು ಎಂದು ಹೇಳಿದ್ದಾರೆ.

ಇತ್ತೀಚೆಗೆ ಮಾನ್ಯ ರೇಲ್ವೆ ಸಚಿವರ ಜತೆ ನಡೆದ ಭೇಟಿ ಸಂದರ್ಭದಲ್ಲಿ ಈ ಬಗ್ಗೆ ಮನವಿ ಮಾಡಲಾಗಿತ್ತು. ಈ ವಿನಂತಿ ಮೇರೆಗೆ ರೇಷ್ಮೆನಾಡು ರಾಮನಗರ ಜಿಲ್ಲೆಯ ರೈಲು ಪ್ರಯಾಣಿಕರಿಗೆ ಬಹಳಷ್ಟು ಅನುಕೂಲವಾಗುವ ನಿರ್ಧಾರವನ್ನು ರೈಲ್ವೆ ಮಂಡಳಿ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೌರವಾನ್ವಿತ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರ ದೂರದೃಷ್ಟಿ ನಾಯಕತ್ವದಲ್ಲಿ ರಾಷ್ಟ್ರದ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಸುಗಮಗೊಳಿಸಲಾಗುತ್ತಿದೆ ಎಂದು ಪೋಸ್ಟ್ ಹಾಕಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಪೋಸ್ಟ್: ಒಡೆಯರ್ ಎಕ್ಸ್‌ಪ್ರೆಸ್ ರಾಮನಗರದಲ್ಲಿ ನಿಲ್ಲುವ ಕುರಿತು ನಿಖಿಲ್ ಕುಮಾರಸ್ವಾಮಿ ಪೋಸ್ಟ್ ಹಾಕಿದ್ದಾರೆ. ರಾಮನಗರ ಜಿಲ್ಲೆಯ ಜನತೆಯ ಬಹುದಿನಗಳ ಕನಸು ನನಸು. ಮೈಸೂರು-ಕೆಎಸ್ಆರ್ ಬೆಂಗಳೂರು ನಡುವೆ ನಿತ್ಯವು ಸಂಚರಿಸಲಿರುವ ಒಡೆಯರ್ ಎಕ್ಸ್‌ಪ್ರೆಸ್‌ ರೈಲು ರಾಮನಗರದಲ್ಲಿ ನಿಲುಗಡೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಕೇಂದ್ರದ ರೇಲ್ವೆ ಸಚಿವರಾದ ಶ್ರೀ ಅಶ್ವಿನ್‌ ವೈಷ್ಣವ್‌ ಅವರಿಗೆ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಮಂತ್ರಿಗಳಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಮನವಿ ಫಲಪ್ರಧವಾಗಿದೆ.

ರಾಮನಗರದಲ್ಲಿ “ಒಡೆಯರ್ ಎಕ್ಸಪ್ರೆಸ್” ನಿಲುಗಡೆಗೆ ಆದೇಶಿಸಿದ ಕೇಂದ್ರ ಸರ್ಕಾರಕ್ಕೆ, ಕೇಂದ್ರ ರೈಲ್ವೇ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಮತ್ತು ರಾಜ್ಯ ಖಾತೆ ಸಚಿವರಾದ ಶ್ರೀ ವಿ.ಸೋಮಣ್ಣ ಅವರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular