ಶಿವಮೊಗ್ಗ : ಕರ್ತವ್ಯ ನಿರತ ಮಹಿಳಾ ಎ ಎಸ್ ಐ ಕುತ್ತಿಗೆಯಲ್ಲಿದ್ದ ಮಾಂಗಲ್ಯ ಸರವನ್ನ ಖದೀಮರು ಹಾಡಹಗಲೇ ಎಗರಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಹೌದು, ಎ ಎಸ್ ಐ ಅಮೃತಾಬಾಯಿ ಕುತ್ತಿಗೆಯಲ್ಲಿದ್ದ 60 ಗ್ರಾಂ ಚಿನ್ನದ ಮಾಂಗಲ್ಯ ಸರವನ್ನ ಖದೀಮರು ಕಳವು ಮಾಡಿದ್ದಾರೆ.
ಶಿವಮೊಗ್ಗ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಎ ಎಸ್ ಐ ಅಮೃತಾಬಾಯಿ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನ ಕಳವು ಮಾಡಲಾಗಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

