HomeKarnatakaBIG NEWS: ಮಹಿಳೆಗೆ ಹೆಲ್ಮೆಟ್ ನಿಂದ ಹೊಡೆದು ಚಿನ್ನದ ಸರ ಕದ್ದೊಯ್ದ ಖದೀಮ

BIG NEWS: ಮಹಿಳೆಗೆ ಹೆಲ್ಮೆಟ್ ನಿಂದ ಹೊಡೆದು ಚಿನ್ನದ ಸರ ಕದ್ದೊಯ್ದ ಖದೀಮ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸರಗಳ್ಳತನ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮಹಿಳೆಯರು ಓಡಾಡಲು ಆತಂಕಪಡುವ ಸ್ಥಿತಿ ನಿರ್ಮಾಣವಾಗಿದೆ.

ಬೈಕ್ ನಲ್ಲಿ ಬಂದ ಕಳ್ಳ ಮಹಿಳೆಯನ್ನು ಹೆಲ್ಮೆಟ್ ನಿಂದ ಹೊಡೆದು ಆಕೆಯ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕದ್ದುಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ತಡಸಿಘಟ್ಟ ಬಳಿ ನಡೆದಿದೆ.

40 ವರ್ಷದ ಮನಿಷಾ ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ತ್ಯಾಮಗೊಂಡ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular