HomeKarnatakaಜಮೀನು ವಿಚಾರಕ್ಕೆ ಗಲಾಟೆಯಾಗಿ ಮಹಿಳೆ ಮೇಲೆ ಹಲ್ಲೆ: ಠಾಣೆ ಎದುರು ಅಹೋರಾತ್ರಿ ಧರಣಿ

ಜಮೀನು ವಿಚಾರಕ್ಕೆ ಗಲಾಟೆಯಾಗಿ ಮಹಿಳೆ ಮೇಲೆ ಹಲ್ಲೆ: ಠಾಣೆ ಎದುರು ಅಹೋರಾತ್ರಿ ಧರಣಿ

ಬೆಂಗಳೂರು: ಜಮೀನು ವಿಚಾರಕ್ಕೆ ಗಲಾಟೆಯಾಗಿ ಮಹಿಳೆ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಜಯಪುರ ಠಾಣೆ ಎದುರು ಮೌನ ಪ್ರತಿಭಟನೆ ನಡೆಸಲಾಗಿದೆ.

ದೂರು ಸ್ವೀಕರಿಸದ ಕಾರಣಕ್ಕೆ ಪೊಲೀಸ್ ಠಾಣೆ ಮುಂದೆ ಕುಟುಂಬದವರು ಮೌನ ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರಿಂದ ನ್ಯಾಯ ಸಿಗುತ್ತಿಲ್ಲ ಎಂದು ಆರೋಪಿಸಿ ಧರಣಿ ಕೈಗೊಂಡಿದ್ದಾರೆ.

ಜಮೀನು ವಿಚಾರಕ್ಕೆ ಎರಡು ಗುಂಪುಗಳ ನಡುವೆ ದೇವನಹಳ್ಳಿ ತಾಲೂಕಿನ ಕೊಡುವನಹಳ್ಳಿ ಗ್ರಾಮದಲ್ಲಿ ಗಲಾಟೆ ನಡೆದಿತ್ತು. ಉಳುಮೆ ಮಾಡುವ ವಿಚಾರಕ್ಕೆ ಲಕ್ಷ್ಮಮ್ಮ ಮತ್ತು ಅಪ್ಪಯ್ಯಣ್ಣ ಅವರ ನಡುವೆ ಗಲಾಟೆ ಆಗಿದ್ದು, ಈ ವೇಳೆ ಲಕ್ಷ್ಮಮ್ಮ ಅವರ ಮೇಲೆ ತಿಲಕ್ ಎಂಬಾತ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆಯ ಸಂಬಂಧ ಠಾಣೆಗೆ ದೂರು ನೀಡಲು ಲಕ್ಷ್ಮಮ್ಮ ಕುಟುಂಬದವರು ಬಂದಿದ್ದಾರೆ. ಆದರೆ, ಪೊಲೀಸರು ದೂರು ಸ್ವೀಕರಿಸಿಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸಲಾಗಿದೆ. ಪೊಲೀಸರ ನಡೆ ಖಂಡಿಸಿ ಲಕ್ಷ್ಮಮ್ಮ ಮತ್ತು ಗ್ರಾಮಸ್ಥರು ಅಹೋರಾತ್ರಿ ಧರಣಿ ನಡೆಸಿದ್ದಾರೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ನ್ಯಾಯ ಕೊಡಿಸಬೇಕೆಂದು ಒತ್ತಾಯಿಸಿದ್ದಾರೆ.

 

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular