HomeLatest NewsBREAKING : ಚಿಕ್ಕಬಳ್ಳಾಪುರದಲ್ಲಿ ಚಲಿಸುತ್ತಿದ್ದ 'KSRTC' ಬಸ್ ನಲ್ಲೇ ವಿಷ ಸೇವಿಸಿ ಮಹಿಳೆ ಆತ್ಮಹತ್ಯೆಗೆ ಯತ್ನ.!

BREAKING : ಚಿಕ್ಕಬಳ್ಳಾಪುರದಲ್ಲಿ ಚಲಿಸುತ್ತಿದ್ದ ‘KSRTC’ ಬಸ್ ನಲ್ಲೇ ವಿಷ ಸೇವಿಸಿ ಮಹಿಳೆ ಆತ್ಮಹತ್ಯೆಗೆ ಯತ್ನ.!

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಕೆಎಸ್ಆರ್ಟಿಸಿ (KSRTC) ಬಸ್ನಲ್ಲಿ ಯುವತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರದ ದೇವನಹಳ್ಳಿ ಸಮೀಪ ಕೆಎಸ್ಆರ್ಟಿಸಿ ಬಸ್ನಲ್ಲಿ ವಿಷ ಸೇವಿಸಿ ಯುವತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಬಸ್ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ಸಿನಲ್ಲಿದ್ದ 48 ಪ್ರಯಾಣಿಕರನ್ನೇ ಲೆಕ್ಕಿಸದೆ, ಬಸ್ಸನ್ನು ನೇರವಾಗಿ ಆಸ್ಪತ್ರೆಗೆ ಕೊಂಡೊಯ್ಯುವ ಮೂಲಕ ಚಾಲಕ ಹಾಗೂ ಕಂಡಕ್ಟರ್ ಮಾದರಿಯಾಗಿದ್ದಾರೆ.

ಬಸ್ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ಸಿನಲ್ಲಿದ್ದ 48 ಪ್ರಯಾಣಿಕರನ್ನೇ ಲೆಕ್ಕಿಸದೆ, ಬಸ್ಸನ್ನು ನೇರವಾಗಿ ಆಸ್ಪತ್ರೆಗೆ ಕೊಂಡೊಯ್ಯುವ ಮೂಲಕ ಚಾಲಕ ಹಾಗೂ ಕಂಡಕ್ಟರ್ ಮಾದರಿಯಾಗಿದ್ದಾರೆ. ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಯುವತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ.ಆತ್ಮಹತ್ಯೆಗೆ ಯತ್ನಿಸಿದವರನ್ನು ಚಿಕ್ಕಬಳ್ಳಾಪುರದ ಹಾಲಗಾನಹಳ್ಳಿ ಗ್ರಾಮದ ನಿವಾಸಿ ನಿರ್ಮಲಾ (24) ಎಂದು ಗುರುತಿಸಲಾಗಿದೆ.
.ಬಸ್ನಲ್ಲಿ ಸುಮಾರು 48 ಮಂದಿ ಪ್ರಯಾಣಿಕರಿದ್ದರು. ಈಕೆ ದೇವನಹಳ್ಳಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತಿದ್ದರು . ಯುವತಿ ವಿಷ ಸೇವಿಸಿದ ತಕ್ಷಣ, ಬಸ್ ಚಾಲಕ ಮತ್ತು ಕಂಡಕ್ಟರ್ ಪ್ರಯಾಣಿಕರಿದ್ದ ಬಸ್ ಅನ್ನು ನೇರವಾಗಿ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಆ ಬಳಿಕ ಪ್ರಯಾಣಿಕರನ್ನು ಬೇರೆ ಬಸ್ನಲ್ಲಿ ಕಳುಹಿಸಲಾಗಿದೆ. ಚಾಲಕ ನಾರಾಯಣಸ್ವಾಮಿ ಮತ್ತು ಕಂಡಕ್ಟರ್ ಸುಧಾಕರ್ ಅವರ ಈ ಸಮಯಪ್ರಜ್ಞೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular