HomeLatest NewsBIG NEWS: ಮಹಿಳೆಯ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್: ಇಬ್ಬರು ರೌಡಿಗಳ ವಿರುದ್ಧ FIR...

BIG NEWS: ಮಹಿಳೆಯ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್: ಇಬ್ಬರು ರೌಡಿಗಳ ವಿರುದ್ಧ FIR ದಾಖಲು

ಬೆಂಗಳೂರು: ಮಹಿಳೆಯ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಇಬ್ಬರು ಪುಡಿರೌಡಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಶೂಟ್ ಗಿರಿ ಹಾಗೂ ಸ್ವರೂಪ್ ಎಂಬುವವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಇಬ್ಬರೂ ರೌಡಿ ಅರಸಯ್ಯನ ಗ್ಯಾಂಗ್ ನಲ್ಲಿ ಗುರುತಿಸಿಕೊಂಡಿದ್ದರು.

2022ರಲ್ಲಿ ಸ್ವರೂಪ್ ಗೆ ಮಹಿಳೆ ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದಳು. ಬಳಿಕ ಮಹಿಳೆ ಬಳಿ ಕಷ್ಟ ಎಂದು 4 ಲಕ್ಷ ಸಾಲ ಪಡೆದಿದ್ದ. ಮಹಿಳೆ ಹಣ ವಾಪಸ್ ಕೇಳುತ್ತಿದ್ದಂತೆ ಆಕೆಯ ಖಾಸಗಿ ವಿಡಿಯೋ, ಫೋಟೋ ಇಟ್ಟುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಿಳೆ ಪೊಲೀಸರಿಗೆ ದೂರು ನೀಡುವುದಾಗಿ ಹೇಳಿದಾಗ ಶೂಟ್ ಗಿರಿ ಎಂಬಾತ ಮಹಿಳೆಯನ್ನು ತಡೆದು ತಾಅನು ಹಣ ಕೊಡುವುದಾಗಿ ಹೇಳಿದ್ದ. ಬಳಿಕ ಹಣ ಕೊಡದೇ ಸತಾಯಿಸಿದ್ದೂ ಅಲ್ಲದೇ ಸ್ವರೂಪ್ ತಂಟೆಗೆ ಬಂದ್ರೆ ಸರಿ ಇರಲ್ಲ ಎಂದು ಬೆದರಿಕೆ ಹಾಕಿದ್ದ. ಅಲ್ಲದೇ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಹಿನ್ನೆಲೆಯಲ್ಲಿ ಮಹಿಳೆ ದೂರು ನೀಡಿದ್ದು, ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular