ದಾವಣಗೆರೆ: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ 25.93 ಲಕ್ಷ ರೂಪಾಯಿ ವಂಚನೆ ಮಾಡಲಾಗಿದೆ.
ಮ್ಯಾಟ್ರಿಮೋನಿ ತಾಣದಲ್ಲಿ ಪರಿಚಿತನಾದ ವ್ಯಕ್ತಿ ವಂಚಿಸಿದ್ದಾನೆ. ಮಂಡ್ಯ ಜಿಲ್ಲೆಯ ಮಧು ವಂಚನೆ ಮಾಡಿದ ಆರೋಪಿ. 35 ವರ್ಷದ ಮಹಿಳೆ ವಂಚನೆಗೆ ಒಳಗಾಗಿದ್ದಾರೆ.
ಮ್ಯಾಟ್ರಿಮೋನಿ ಜಾಲತಾಣದ ಮೂಲಕ ಪರಿಚಿತನಾಗಿದ್ದ ಮಧು ಮಹಿಳೆಯ ಸಹೋದರರಿಗೆ ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿದ್ದಾನೆ. ಸೆಪ್ಟೆಂಬರ್ 14 ರಿಂದ ಅಕ್ಟೋಬರ್ 30ರವರೆಗೆ ವಂಚಕ ಹೇಳಿದ ಖಾತೆಗೆ ಮಹಿಳೆ ಹಣ ವರ್ಗಾಯಿಸಿದ್ದಾರೆ. ಕೊನೆಗೆ ವಂಚನೆಗೊಳಗಾಗಿರುವುದು ಗೊತ್ತಾಗಿ ದಾವಣಗೆರೆ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
