BIG NEWS: ಮಠಕ್ಕೆ ಜಮೀನು ಕೊಡುವುದಾಗಿ ಹೇಳಿ 35 ಲಕ್ಷ ರೂಪಾಯಿ ವಂಚಿಸಿದ ಮಹಿಳೆ

ಬೆಂಗಳೂರು: ಮಠಕ್ಕೆ ಜಮೀನು ಕೊಡುವುದಾಗಿ ನಂಬಿಸಿ ಮಹಿಳೆಯೊಬ್ಬರು ಚನ್ನವೀರ ಶಿವಾಚಾರ್ಯ ಸ್ವಾಮೀಜಿಯವರಿಗೆ 35 ಲಕ್ಷ ರೂಪಾಯಿ ವಂಚಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ವರ್ಷ ಎಂಬ ಮಹಿಳೆ 2020ರಲ್ಲಿ ಫೇಸ್ ಬುಕ್ ಮೂಲಕ ಪರಿಚಯವಾಗಿ ಸ್ವಾಮೀಜಿ ಬಳಿ ಕಷ್ಟಗಳನ್ನು ಹೇಳಿಕೊಂಡಿದ್ದಳು. ಬಳಿಕ ತನ್ನ ಬಳಿ ಇದ್ದ 10 ಎಕರೆ ಜಮೀನನ್ನು ಮಠಕ್ಕೆ ನೀಡುವುದಾಗಿ ಹೇಳಿ ನಂಬಿಸಿದ್ದಳು. ಹಂತ ಹಂತವಾಗಿ 35 ಲಕ್ಷ ರೂಪಾಯಿ ಹಣವನ್ನು ಪಾವತಿಸಿಕೊಂಡು ವಂಚಿಸಿದ್ದಾಳೆ ಎಂದು ಕಂಬಾಳು ಮಠದ ಪೀಠಾಧಿಪತಿ ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಡಾಬಸ್ ಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ.

ಜಮೀನಿನ ದಾಖಲೆಗಳನ್ನು ಕೊಡುತ್ತೇನೆ ಎಂದು ಹೇಳಿದ್ದ ಮಹಿಳೆ ನಂತರದಲ್ಲಿ ತನ್ನ ಮೇಲೆ ಹಲ್ಲೆಯಾಗಿದ್ದು, ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ದಾಖಲಾಗಿದ್ದಾಗಿ ತಿಳಿಸಿದ್ದಳು. ಆಸ್ಪತ್ರೆಯಲ್ಲಿ ವಿಚಾರಿಸಿದಾಗ ಅಂತಹ ಯಾವುದೇ ಮಹಿಳೆ ದಾಖಲಾಗಿಲ್ಲ ಎಂಬುದು ಗೊತ್ತಾಗಿದೆ. ಈ ವೇಳೆ ತಮಗೆ ಮಹಿಳೆ ವಂಚಿಸಿದ್ದಾಳೆ ಎಂಬುದು ಗೋಚರವಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಚನ್ನವೀರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read