HomeKarnatakaBREAKING: ಪೊಲೀಸರ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ; ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿ-ಮಗುವಿನ ರಕ್ಷಣೆ

BREAKING: ಪೊಲೀಸರ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ; ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿ-ಮಗುವಿನ ರಕ್ಷಣೆ

ಬೆಂಗಳೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿ ಹಾಗೂ ಮಗು ಇಬ್ಬರನ್ನು ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನಾಗೊಂಡನಹಳ್ಳಿಯಲ್ಲಿ ನಡೆದಿದೆ.

ಪತಿ ಕೆಲಸಕ್ಕೆ ಹೋಗಿದ್ದ ವೇಳೆ ಮಹಿಳೆ ಗ್ಯಾಸ್ ಲೀಕ್ ಮಾಡಿ ತನ್ನ ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಕುಟುಂಬದವರು ಎಷ್ಟೇ ಬಾಗಿಲು ಬಡಿದರೂ ಮನೆ ಬಾಗಿಲು ತೆಗೆದಿಲ್ಲ. ಈ ವೇಳೆ ಗಾಬರಿಯಾದ ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಅಗ್ನಿಶಾಮಕ ಸಿಬ್ಬಂದಿಯೊಂದಿಗೆ ಧಾವಿಸಿದ ಪೊಲೀಸರು ಮನೆ ಬಾಗಿಲು ಒಡೆದು ಮಹಿಳೆ ಹಾಗೂ ಮಗುವನ್ನು ರಕ್ಷಿಸಿದ್ದಾರೆ. ಈ ವೇಳೆ ಗ್ಯಾಸ್ ಲೀಕ್ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದು ಬಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular