ಹಾಸನ: ಮನೆಯೊಂದರಲ್ಲಿ ಮಹಿಳೆ ಬೆತ್ತಲೆ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಗಾಣಿಗರ ಬೀದಿಯಲ್ಲಿ ನಡೆದಿದೆ.
ಚಿಕ್ಕಮಗಳೂರುನ ಮಲ್ಲೇನಹಳ್ಳಿ ಗ್ರಾಮದ ಸ್ಪಂದನ (34) ಮೃತ ಮಹಿಳೆ. ಎಂಟು ದಿನಗಳ ಹಿಂದೆ ಬೇಲೂರು ಪಟ್ಟಣದ ಬಾಡಿಗೆ ಮನೆ ಪಡೆದು ವಾಸವಾಗಿದ್ದರು. ಎರಡು ದಿನಗಳಿಂದ ಮನೆ ಬಾಗಿಲು ತೆರೆದೇ ಇತ್ತು. ಮನೆಯ ಒಳಗೆ ಯಾರೂ ಇದ್ದಂತೆ ಕಾಣುತ್ತಿರಲಿಲ್ಲ. ಕರೆದರೂ ಯಾರೂ ಮಾತನಾಡುತ್ತಿರಲಿಲ್ಲ. ಇದರಿಂದ ಅನುಮಾನಗೊಂಡ ಅಕ್ಕಪಕ್ಕದ ನಿವಾಸಿಗಳು ಪೊಲೀಸರುಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕಾಗಮಿಸಿದ ಪೊಲೀಸರು ಮನೆಯೊಳಗೆ ಪರಿಶೀ;ಇಸಿದಾಗ ಮಹಿಳೆ ಶವವಾಗಿ ಪತ್ತೆಯಾಗಿದ್ದಾರೆ. ಮಹಿಳೆಯನ್ನು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಬೇಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
