ರಾಯಚೂರು: ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಆನೆ ಹೊಸೂರು ಬಳಿ ನಡೆದಿದೆ.
ಮಸ್ಕಿ ತಾಲೂಕಿನ ನಂಜಲದಿನ್ನಿ ಗ್ರಾಮದ ಈರಮ್ಮ (35) ಹಾಗೂ ದೇವಮ್ಮ (30) ಮೃತ ದುರ್ದೈವಿಗಳು. ನಾರಾಯಣಪುರ ಬಲದಂಡೆ ಕಾಲುವೆಯಲ್ಲಿ ಕೈ-ಕಾಲು ತೊಳೆಯಲೆಂದು ಹೋಗಿ ಈ ದುರಂತ ಸಂಭವಿಸಿದೆ.
ಲಿಂಗಸಗೂರು ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಇಬ್ಬರು ಮಹಿಳೆಯರ ಮೃತದೇಹವನ್ನು ಕಾಲುವೆಯಿಂದ ಹೊರ ತೆಗೆದಿದ್ದಾರೆ. ಲಿಂಗಸಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

