HomeKarnatakaBIG NEWS: ಸ್ನಾನಕ್ಕೆ ಹೋಗಿದ್ದ ಮಹಿಳೆ ಅನುಮಾನಾಸ್ಪದವಾಗಿ ಸಾವು

BIG NEWS: ಸ್ನಾನಕ್ಕೆ ಹೋಗಿದ್ದ ಮಹಿಳೆ ಅನುಮಾನಾಸ್ಪದವಾಗಿ ಸಾವು

ಬೆಂಗಳೂರು: ಸ್ನಾನಕ್ಕೆ ಹೋಗಿದ್ದ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅಡೇಪೇಟೆಯಲ್ಲಿ ನಡೆದಿದೆ.

ಲಕ್ಷ್ಮೀ (25) ಮೃತ ಮಹಿಳೆ. ಸಂಧಿಕರಿಒಬ್ಬರ ಮನೆಗೆ ಹೋಗಿದ್ದ ವೇಳೆ ಸ್ನಾನಕ್ಕೆಂದು ಹೋಗಿದ್ದ ಲಕ್ಷ್ಮೀ ನಿಗೂಢವಾಗಿ ಸಾವನ್ನಪ್ಪಿದ್ದಾರೆ.

ಆಂಧ್ರಪ್ರದೇಶದ ತಿರುಪತಿ ಮೂಲದ ಲಕ್ಷ್ಮೀ ತನ್ನ ಪತಿಯೊಂದಿಗೆ ಮಲ್ಲೇಶ್ವರಂನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದರು. ಅಡೇಪೇಟೆಯಲ್ಲಿರುವ ಸಂಬಂಧಿ ಸುಹಾಸಿನಿ ಎಂಬುವವರ ಮನೆಗೆ ಪತಿ ಜೊತೆ ಹೋಗಿದ್ದ ವೇಳೆ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮನೆಯಲ್ಲಿಯೇ ಎಲ್ಲರೂ ಇದ್ದರು. ಸ್ನಾನಕ್ಕೆಂದು ಹೋದ ಲಕ್ಷ್ಮೀ ಶವವಾಗಿ ಪತ್ತೆಯಾಗಿದ್ದಾರೆ. ಸ್ನಾನಕ್ಕೆ ಹೋಗುವ ಮುನ್ನ ಲಕ್ಷ್ಮೀ ಮುಖದ ಮೇಲೆ ಏನೂ ಆಗಿರಲಿಲ್ಲ. ಯಾವುದೇ ಗಾಯದ ಗುರುತುಗಳೂ ಇರಲಿಲ್ಲ. ಸ್ನಾನದ ಗೃಹದಲ್ಲಿ ಬೆತ್ತಲಾಗಿ ಮಹಿಳೆ ಬಿದ್ದಿದ್ದು, ಮುಖದಲ್ಲಿ ಪರಚಿರುವ ಗಾಯಗಳಾಗಿವೆ. ಮನೆಗೆ ಬೇರೆ ಯಾರೂ ಬಂದಿರಲಿಲ್ಲ. ಗ್ಯಾಸ್ ಗೀಸರ್ ಕೂಡ ಆನ್ ಇರಲಿಲ್ಲ. ಬಕೆಟ್ ನಲ್ಲಿ ನೀರು ಸಹ ತುಂಬಿರಲಿಲ್ಲ. ಆದರೂ ಮಹಿಳೆ ಸ್ನಾನದ ಮನೆಯಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದು, ಅನುಮಾನಕ್ಕೆ ಕಾರಣವಾಗಿದೆ.

ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular