HomeKarnatakaBIG NEWS: ಭಾರಿ ಮಳೆಗೆ ಕುಸಿದು ಬಿದ್ದ ಮನೆ ಗೋಡೆ: ಮಹಿಳೆ ದುರ್ಮರಣ

BIG NEWS: ಭಾರಿ ಮಳೆಗೆ ಕುಸಿದು ಬಿದ್ದ ಮನೆ ಗೋಡೆ: ಮಹಿಳೆ ದುರ್ಮರಣ

ತುಮಕೂರು: ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಜಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

27 ವರ್ಷದ ಸಹನಾ ಮೃತ ಮಹಿಳೆ. ಬೆಳಿಗ್ಗೆ ಸ್ನಾನಕ್ಕೆಂದು ಹೋಗಿದ್ದ ವೇಳೆ ಮನೆಗೋಡೆ ಕುಸಿದು ಬಿದ್ದು ಮಣ್ಣಿನಡಿ ಸಿಲುಕಿದ್ದರು. ಗ್ರಾಮಸ್ಥರು ಸಹನಾಳನ್ನು ರಕ್ಷಣೆ ಮಾಡಿ, ಗಂಭೀರ ಸ್ಥಿತಿಯಲ್ಲಿದ್ದ ಆಕೆಯನ್ನು ಗುಬ್ಬಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದರು.

ಸಹನಾಳನ್ನು ಪರೀಕ್ಷಿಸಿದ ವೈದ್ಯರು ಅದಾಗಲೇ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular