HomeKarnatakaಜಮೀನಿಗೆ ಹೋಗಿದ್ದಾಗ ದುರಂತ: ಹಾವು ಕಚ್ಚಿ ರೈತ ಮಹಿಳೆ ಸಾವು

ಜಮೀನಿಗೆ ಹೋಗಿದ್ದಾಗ ದುರಂತ: ಹಾವು ಕಚ್ಚಿ ರೈತ ಮಹಿಳೆ ಸಾವು

ಹಾವೇರಿ: ಜಮೀನು ಕೆಲಸಕ್ಕೆಂದು ಹೋಗಿದ್ದ ವೇಳೆ ಹಾವು ಕಚ್ಚಿ ಮಹಿಳೆ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ತಮರಿಕೊಪ್ಪ ಗ್ರಾಮದಲ್ಲಿ ನಡೆದಿದೆ.

45 ವರ್ಷದ ರೇಣುಕಾ ಮೃತ ಮಹಿಳೆ. ಕೆಲಸಕ್ಕೆಂದು ಜಮೀನಿಗೆ ಹೋಗಿದ್ದ ವೇಳೆ ಮಹಿಳೆಗೆ ಹಾವು ಕಚ್ಚಿತ್ತು. ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಸಂಬಂಧಕರು ಮಾಹಿತಿ ನೀಡಿದ್ದಾರೆ.

ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular