ಚಲಿಸುತ್ತಿದ್ದ ರೈಲಿನಲ್ಲಿಯೇ ಮಗುವಿಗೆ ಜನ್ಮ ನೀಡಿದ ಮಹಿಳೆ: ಮಾನವೀಯತೆ ಮೆರೆದ ಟಿಕೆಟ್ ತಪಾಸಣಾ ಸಿಬ್ಬಂದಿ

ಚಲಿಸುತ್ತಿದ್ದ ರೈಲಿನಲ್ಲಿಯೇ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ರೈಲಿನಲ್ಲಿಯೇ ಮಗುವಿಗೆ ಜನ್ಮ ನೀಡಿರುವ ಘಟನೆ ಬೆಳಕಿಗೆ ಬಂದಿದೆ.

ಪ್ರಯಾಗ್ ರಾಜ್ ದುರಂತೋ ಎಕ್ಸ್ ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದೆ. ರೈಲಿನಲ್ಲಿ ತುಂಬು ಗರ್ಭಿಣಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಟಿಕೆಟ್ ತಪಾಸಣಾ ಸಿಬ್ಬಂದಿ ಹಾಗೂ ಪ್ರಯಾಣಿಕರು ಮಹಿಳೆಗೆ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ.

ತಾಯಿ ಹಾಗೂ ಮಗು ಆರೋಗ್ಯದಿಂದ ಇದ್ದಾರೆ. ಈ ಬಗ್ಗೆ ಸೆಂಟ್ರಲ್ ರೈಲ್ವೆ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಷಯ ಹಂಚಿಕೊಂಡಿದ್ದು, ಮಹಿಳೆಯೊಬ್ಬರು ಸುರಕ್ಷಿತವಾಗಿ ರೈಲಿನಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾರೆ. ಆಕೆಗೆ ಟಿಕೆಟ್ ತಪಾಸಣಾ ಸಿಬ್ಬಂದಿ ಹಾಗೂ ಪ್ರಯಾಣಿಕರು ಮಾಡಿದ ಸಹಾಯ ಶ್ಲಾಘನೀಯ. ಮಹಿಳೆಗೆ ತ್ವರಿತ ಪ್ರತಿಕ್ರಿಯೆ ಜೊತೆಗೆ ಟಿಕೆಟ್ ತಪಾಸಣಾ ಸಿಬ್ಬಂದಿ ಶ್ರೀನಂದ್ ಬಿಹಾರಿ ಮೀನಾ, ಅಲೋಕ್ ಶರ್ಮಾ, ರಾಜಕರಣ್ ಯಾದವ್, ಇಂದ್ರ ಕುಮಾರ್ ನೆರವಿಗೆ ಬಂದರು ಎಂದು ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read