ಉಡುಪಿ: ಮಗುವಿಗೆ ಜನ್ಮ ನೀಡಿದ ಬಾಣಂತಿ ಹೃದಯ ಸಂಬಂಧಿ ಕಾಯಿಲೆಯಿಂದ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕೊಲ್ಲೂರು ಕೆರಾಡಿಯ 28 ವರ್ಷದ ಬಾಣಂತಿ ಜನವರಿ 27ರಂದು ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿಪೂರ್ವ ಎಂಟು ತಿಂಗಳಿಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಫೆಬ್ರವರಿ 5ರಂದು ಅವರಿಗೆ ಹೃದಯ ಸಂಬಂಧಿ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೈದ್ಯರ ಸೂಚನೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಫೆಬ್ರವರಿ 6ರಂದು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಬಾಣಂತಿ ಫೆಬ್ರವರಿ 9ರಂದು ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

