ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರವಾಗಿ ಸಿಎಂ ಸಿದ್ಧರಾಮಯ್ಯ ಮತ್ತು ಸಚಿವರು ಸೇರಿದಂತೆ ನಾಯಕರು ಮತಯಾಚನೆ ಮಾಡಿದ್ದಾರೆ.
ಮೆರವಣಿಗೆಯಲ್ಲಿ ಭಾಗವಹಿಸಲು ಬರುತ್ತಿದ್ದ ಮಹಿಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಫಾತಿಮಾ ಮೃತಪಟ್ಟ ಮಹಿಳೆ.
ಬಾಗಲಕೋಟೆಯ ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್ ಮೆರವಣಿಗೆಯಲ್ಲಿ ಫಾತಿಮಾ ಭಾಗವಹಿಸಿದ್ದ ವೇಳೆ ಘಟನೆ ನಡೆದಿದೆ. ಫಾತಿಮಾ ನಿಧನಕ್ಕೆ ಮುಖ್ಯಮಂತ್ರಿ ಸೇರಿದಂತೆ ನಾಯಕರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಪ್ರಚಾರಸಭೆ ವೇದಿಕೆಯಲ್ಲಿ ಮೌನಾಚರಣೆಯ ಮೂಲಕ ಫಾತಿಮಾ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗಿದೆ.

