ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಮತ್ತು ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಸವೇಶ್ವರನಗರದ ನಿವಾಸಿ ಪವಿತ್ರಾ ಎಂಬುವರು ನೀಡಿದ ದೂರಿನ ಅನ್ವಯ ಸ್ನೇಹಮಯಿ ಕೃಷ್ಣ ಹಾಗೂ ಮೈಲಾರಪ್ಪ ಅವರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಪವಿತ್ರಾ ಅವರ ಪತಿ ಕಳೆದ ವರ್ಷ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಾವಿನ ಪ್ರಕರಣದಲ್ಲಿ ಸ್ನೇಹಮಯಿ ಕೃಷ್ಣ ಅನಗತ್ಯ ಹಸ್ತಕ್ಷೇಪ ಮಾಡುತ್ತಿದ್ದಾರೆ. ಮೈಲಾರಪ್ಪ ವಿರುದ್ಧ ನೀಡಿದ್ದ ದೂರು ವಾಪಸ್ ಪಡೆಯುವಂತೆ ತಾಕೀತು ಮಾಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆ ದೂರು ನೀಡಿದ್ದಾರೆ.

