HomeLatest Newsಕುಟುಂಬದವರ ಮೇಲೆ ವರದಕ್ಷಿಣೆ ದೂರು ನೀಡಿದ ಮಹಿಳೆ: ಮರ್ಯಾದೆಗೆ ಅಂಜಿ ವ್ಯಕ್ತಿ ಆತ್ಮಹತ್ಯೆ

ಕುಟುಂಬದವರ ಮೇಲೆ ವರದಕ್ಷಿಣೆ ದೂರು ನೀಡಿದ ಮಹಿಳೆ: ಮರ್ಯಾದೆಗೆ ಅಂಜಿ ವ್ಯಕ್ತಿ ಆತ್ಮಹತ್ಯೆ

ಹಾವೇರಿ: ಪೊಲೀಸ್ ಠಾಣೆಯಲ್ಲಿ ತನ್ನ ವಿರುದ್ಧ ದೂರು ದಾಖಲಾಗಿದ್ದರಿಂದ ಮರ್ಯಾದೆಗೆ ಅಂಜಿದ ವ್ಯಕ್ತಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ನಡೆದಿದೆ.

ದಾದಾಪೀರ್(38) ಆತ್ಮಹತ್ಯೆಗೆ ಮಾಡಿಕೊಂಡವರು. ದಾದಾಪೀರ್ ಅವರ ಸಹೋದರ ಮೊಹಮ್ಮದ್ ರಫೀಕ್ ಮತ್ತು ಆತನ ಪತ್ನಿ ನೂರ್ ಬೇಬಿ ಮಧ್ಯೆ ಕಲಹ ಉಂಟಾಗಿತ್ತು. ದಂಪತಿ ಮಧ್ಯದ ಕಲಹದಲ್ಲಿ ಕುಟುಂಬದವರೆಲ್ಲರ ಮೇಲೆ ದೂರು ನೀಡಲಾಗಿತ್ತು. ವರದಕ್ಷಿಣೆ ಕಿರುಕುಳ ನೀಡುತ್ತಿರುವುದಾಗಿ 11 ಜನರ ವಿರುದ್ಧ ರಫೀಕ್ ಪತ್ನಿ ನೂರ್ ಬೇಬಿ ಮಹಿಳಾ ಠಾಣೆಗೆ ನೀಡಿದ್ದಾರೆ

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮನೆಗೆ ಆಗಮಿಸಿ ಸ್ಥಳ ಮಹಜರು ನಡೆಸಿದ್ದರು. ವಿಚಾರಣೆಗಾಗಿ ಠಾಣೆಗೆ ಬರುವಂತೆ ದಾದಾಪೀರ್ ಗೆ ಸೂಚಿಸಿದ್ದರು. ಇದರಿಂದ ಭಯಗೊಂಡ ದಾದಾಪೀರ್ ಮರ್ಯಾದೆಗೆ ಅಂಜಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular