HomeIndiaಹೋಟೆಲ್ ನಲ್ಲಿ ಮಹಿಳೆಗೆ ಬಲವಂತವಾಗಿ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ: 5 ಮಂದಿ ಅರೆಸ್ಟ್

ಹೋಟೆಲ್ ನಲ್ಲಿ ಮಹಿಳೆಗೆ ಬಲವಂತವಾಗಿ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ: 5 ಮಂದಿ ಅರೆಸ್ಟ್

ಉತ್ತರ ಪ್ರದೇಶದ ಆಗ್ರಾದಲ್ಲಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ಆಕೆಯ ಸ್ನೇಹಿತೆ ಮತ್ತು ಇತರರು ಬಲವಂತವಾಗಿ ಮಹಿಳೆಗೆ ಮದ್ಯ ಕುಡಿಸಿದ್ದರು. ಆಕೆ ಪ್ರತಿಭಟಿಸಲು ಮುಂದಾದಾಗ ಕೆಲವರು ಎಳೆದಾಡಿ ಥಳಿಸಿದ್ದಾರೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.

ಮಹಿಳೆ ಹೋಟೆಲ್‌ನಲ್ಲಿ ಉದ್ಯೋಗಿಯಾಗಿದ್ದು, ಒಂದೂವರೆ ವರ್ಷದಿಂದ ಅಲ್ಲಿ ಕೆಲಸ ಮಾಡುತ್ತಿದ್ದರು. ಆಕೆಗೆ ಬಲವಂತದಿಂದ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಬ್ಬ ವ್ಯಕ್ತಿ ಕೋಣೆಯೊಳಗೆ ಎಳೆದುಕೊಂಡು ಹೋಗುತ್ತಿರುವಾಗ ಮಹಿಳೆ ಸಹಾಯಕ್ಕಾಗಿ ಬೇಡಿಕೊಳ್ಳುತ್ತಿರುವುದನ್ನು ವೈರಲ್ ವಿಡಿಯೋ ತೋರಿಸಿದೆ. ದಯವಿಟ್ಟು ನನಗೆ ಸಹಾಯ ಮಾಡಿ ಎಂದು ಆಕೆ ಹೇಳುತ್ತಿರುವುದು ವೀಡಿಯೊದಲ್ಲಿ ಕೇಳಿಬರುತ್ತಿದೆ.

ಕೋಣೆಯಲ್ಲಿ ಬಲವಂತವಾಗಿ ಹಿಡಿದುಕೊಂಡು ಅಮಾನುಷವಾಗಿ ಥಳಿಸಲಾಗಿದೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ. ಆರೋಪಿಗಳು ಆಕೆಗೆ ಮದ್ಯ ಸೇವಿಸುವಂತೆ ಒತ್ತಾಯಿಸಿದ್ದಾರೆ. ಹಲ್ಲೆ ಮಾಡಿ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ನೀಡಲಾಗಿದೆ.

ಎಸಿಪಿ ಸದರ್ ಅರ್ಚನಾ ಸಿಂಗ್ ಪ್ರಕಾರ, ಆಗ್ರಾದ ತಾಜ್‌ ಗಂಜ್ ಠಾಣೆ ಪೊಲೀಸರಿಗೆ ಹೋಟೆಲ್‌ನಲ್ಲಿ ಅತ್ಯಾಚಾರ ನಡೆದಿರುವ ಮಾಹಿತಿ ಸಿಕ್ಕಿತ್ತು. ಮಹಿಳೆಯ ಆರೋಪವನ್ನು ಅರಿತು ಅತ್ಯಾಚಾರ, ಹಲ್ಲೆ ಮತ್ತು ಇತರ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಾಲ್ವರು ಪುರುಷರು ಮತ್ತು ಮಹಿಳೆ ಸೇರಿದಂತೆ ಎಲ್ಲಾ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಅತ್ಯಾಚಾರ ಆರೋಪ ಮಾಡಿದ ಹೋಟೆಲ್ ಉದ್ಯೋಗಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular