ಅಹಮದಾಬಾದ್: ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆಯನ್ನು ಕರೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಗುಜರಾತ್ ನ ಸೋಮನಾಥ ಜಿಲ್ಲೆಯ ಉನಾದಲ್ಲಿ ನಡೆದಿದೆ.
ಕೂಲಿ ಕೆಲಸ ಮಾಡಿಕೊಂಡು ಜಿವನ ಸಾಗಿಸುತ್ತಿದ್ದ ಮಹಿಳೆಯನ್ನು ಡ್ರಾಪ್ ಮಾಡುವುದಾಗಿ ಹೇಳಿ ಕರೆದೊಯ್ದು ಕಾಮುಕರು ಅಟ್ಟಹಾಸ ಮೆರೆದಿದ್ದಾರೆ. 24 ಗಂಟೆಯಲ್ಲಿ ಮಹಿಳೆ ಮೇಲೆ ಎರಡು ಬಾರಿ ಸಾಮೂಹಿಕ ಅತ್ಯಾಚಾರ ನಡೆದಿದೆ.
ಸಂತ್ರಸ್ತ ಮಹಿಳೆಯನ್ನು ಉನಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆಯ ಪತಿ 10 ವರ್ಷಗಳ ಹಿಂದೆಯೇ ನಿಧನರಾಗಿದ್ದಾರೆ. ಮಹಿಳೆ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಮಾಂಡ್ವಿ ಚೆಕ್ ಪೋಸ್ಟ್ ನಿಂದ ತನ್ನ ಗ್ರಾಮಕ್ಕೆ ಹೋಗುತ್ತಿದ್ದಾಗ ಎರಡು ಬೈಕ್ ನಲ್ಲಿ ಬಂದ ಮೂವರು ಪರಿಚಯಸ್ಥರು, ತಾವೂ ಹಳ್ಳಿಯತ್ತ ಹೋಗುತ್ತಿದ್ದು ಡ್ರಾಪ್ ಕೊಡುತ್ತೇವೆ ಎಂದು ಕರೆದೊಯ್ದು ಕೃತ್ಯವೆಸಗಿದ್ದಾರೆ. ಬಳಿಕ ಮಹಿಳೆಯನ್ನು ಮತ್ತೋರ್ವ ಆರೋಪಿ ತನ್ನ ಮನೆಗೆ ಎಳೆದೊಯ್ದು ಮತ್ತೆ ಅತ್ಯಾಚಾರವೆಸಗಿದ್ದಾನೆ. ಮಹಿಳೆಯ ಪರಿಚಯದವರೇ ಈ ಕೃತ್ಯವೆಸಗಿದ್ದು, ಬಾಯಿಬಿಡದಂತೆ ಬೆದರಿಕೆಯನ್ನೂ ಹಾಕಿದ್ದಾರೆ.
ಸಂತ್ರಸ್ತ ಮಹಿಳೆ ಮೆರೈನ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ನಡೆಸಿದ್ದಾರೆ.