HomeLatest NewsBIG NEWS: ಹಣದ ಸಹಾಯ ಕೇಳಲು ಬಂದಿದ್ದ ಮಹಿಳೆಗೆ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ

BIG NEWS: ಹಣದ ಸಹಾಯ ಕೇಳಲು ಬಂದಿದ್ದ ಮಹಿಳೆಗೆ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ

ಕೊಪ್ಪಳ: ಮಹಿಳೆಗೆ ಮದ್ಯ ಕುಡಿಸಿ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಹೇಯ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನಲ್ಲಿ ನಡೆದಿದೆ.

39 ವರ್ಷದ ಮಹಿಳೆಯ ಮೇಲೆ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದೆ. ಇಲ್ಲಿನ ಮದ್ಲೂರು ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹೊಸಪೇಟೆ ಮೂಲದ ಮಹಿಳೆ ಪರಿಚಯಸ್ಥರಿಂದ ಹಣ ಪಡೆಯಲು ಕುಷ್ಟಗಿ ಪಟ್ಟಣಕ್ಕೆ ಬಂದಿದ್ದರು. ಈ ವೇಳೆ ಮಹಿಳೆಯನ್ನು ಬೈಕ್ ನಲ್ಲಿ ಕರೆದೊಯ್ದ ದುಷ್ಕರ್ಮಿಗಳು ಅತ್ಯಾಚಾರವೆಸಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಸ್ವಸ್ಥಗೊಂಡ ಮಹಿಳೆಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿವೈಎಸ್ಪಿ ಮುತ್ತಣ್ಣ ಸವರಗೋಳ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತೆಯಿಂದ ಮಾಹಿತಿ ಪಡೆದಿದ್ದಾರೆ. ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular