ಬೆಂಗಳೂರು : ಬೆಂಗಳೂರಿನಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ರಾತ್ರಿ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ್ದರು. ಏಕಾಏಕಿ ಮನೆಗೆ ನುಗ್ಗಿದ್ದ ಮೂವರು ಕುಡಿದ ಮತ್ತಿನಲ್ಲಿ ಹೇಯ ಕೃತ್ಯವೆಸಗಿ ಪರಾರಿಯಾಗಿದ್ದಾರೆ.
ಮಹಿಳೆ ನೀಡಿದ ದೂರಿನ ಹಿನೆಲೆಯಲ್ಲಿ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಪೊಲೀಸರು ಪಶ್ಚಿಮ ಬಂಗಾಳ ಮೂಲದ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ . ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ. ಬಾಬಾ ಅವರು ಮೂವರು ಶಂಕಿತರನ್ನು – ಕಾರ್ತಿಕ್, ಗ್ಲೆನ್ ಮತ್ತು ಸುಯೋಗ ಬಂಧಿಸಲಾಗಿದೆ ಎಂದು ದೃಢಪಡಿಸಿದರು.ಆರೋಪಿಗಳು ಸಂತ್ರಸ್ತೆಗೆ ಮೊದಲೇ ಪರಿಚಿತರಾಗಿದ್ದರು ಎಂದು ಪ್ರಾಥಮಿಕ ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ.

