ರಾಯಚೂರು: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಲ್ಲಿ ಗರ್ಭಿಣಿಯೊಬ್ಬರು ಮಗುವಿಗೆ ಜನ್ಮ ನೀಡಿದ ಘಟನೆ ರಾಯಚೂರು ಜಿಲ್ಲೆಯ ಮುದಗಲ್ ನಲ್ಲಿ ಭಾನುವಾರ ನಡೆದಿದೆ.
ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಹೊಂಬಳಕಲ್ ಗ್ರಾಮದ ಶಾಂಭವಿ ರೇವಣಸಿದ್ದಪ್ಪ(19) ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಕೂಲಿ ಕೆಲಸಕ್ಕಾಗಿ ಉತ್ತರ ಕನ್ನಡ ಜಿಲ್ಲೆಯ ಕಾರವಾರಕ್ಕೆ ಗುಳೆ ಹೋಗಿದ್ದ ದಂಪತಿ ಬಸ್ ನಲ್ಲಿ ತಮ್ಮ ಗ್ರಾಮಕ್ಕೆ ಹಿಂತಿರುಗುವಾಗ ಮುದಗಲ್ ಸಮೀಪ ಶಾಂಭವಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ.
ಬಸ್ ನಲ್ಲಿ ಪ್ರಯಾಣಿಸುತ್ತಿದ್ದೆ ಆಶಾ ಕಾರ್ಯಕರ್ತೆ ಮೇರಿ ಪ್ರಯಾಣಿಕರ ಸಹಕಾರದೊಂದಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ನಂತರ ಬಸ್ ಚಾಲಕ ಮಹಿಳೆಯನ್ನು ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ತಾಯಿ, ಮಗು ಆರೋಗ್ಯವಾಗಿದ್ದಾರೆ.