HomeIndiaಬರೋಬ್ಬರಿ 84 ಕೋಟಿ ರೂ. ಮೌಲ್ಯದ ಹೆರಾಯಿನ್ ತರುತ್ತಿದ್ದ ಮಹಿಳೆ ಅಂದರ್....!

ಬರೋಬ್ಬರಿ 84 ಕೋಟಿ ರೂ. ಮೌಲ್ಯದ ಹೆರಾಯಿನ್ ತರುತ್ತಿದ್ದ ಮಹಿಳೆ ಅಂದರ್….!

ಮಹತ್ವದ ಕಾರ್ಯಾಚರಣೆಯೊಂದರಲ್ಲಿ ರೆವಿನ್ಯೂ ಇಂಟಲಿಜೆನ್ಸ್ ನಿರ್ದೇಶನಾಲಯದ ಅಧಿಕಾರಿಗಳು ಹರಾರೆಯಿಂದ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮಹಿಳೆಯನ್ನು ಬಂಧಿಸಿ ಆಕೆಯಿಂದ ಬರೋಬ್ಬರಿ 84 ಕೋಟಿ ರೂ. ಮೌಲ್ಯದ ಹೆರಾಯಿನ್ ಪಶಪಡಿಸಿಕೊಂಡಿದ್ದಾರೆ.

ಮಂಗಳವಾರದಂದು ಈಕೆ ಮುಂಬೈ ವಿಮಾನ ನಿಲ್ದಾಣಕ್ಕೆ ಬಂದ ವೇಳೆ ತಮಗೆ ದೊರೆತಿದ್ದ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ಆಕೆಯ ಬ್ಯಾಗೇಜ್ ತಪಾಸಣೆ ನಡೆಸಿದಾಗ 11.94 ಕೆಜಿ ಹೆರಾಯಿನ್ ಅಡಗಿಸಿರುವುದು ಪತ್ತೆಯಾಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಮೌಲ್ಯ 84 ಕೋಟಿ ರೂಪಾಯಿಗಳು ಎಂದು ಹೇಳಲಾಗಿದೆ.

ಬಳಿಕ ಆಕೆಯನ್ನು ಹೆಚ್ಚಿನ ವಿಚಾರಣೆ ನಡೆಸಿದಾಗ ಮುಂಬೈನ ಇಬ್ಬರಿಗೆ ಇದನ್ನು ತಲುಪಿಸಲು ಬಂದಿರುವುದಾಗಿ ಹೇಳಿದ್ದಾಳೆ. ನಂತರ ಈಕೆಯನ್ನು ಕರೆದೊಯ್ಯಲು ಬಂದಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಮತ್ತಷ್ಟು ಮಂದಿ ಇದರಲ್ಲಿ ಶಾಮೀಲಾಗಿರುವ ಶಂಕೆಯಿಂದ ವಿಚಾರಣೆ ಮುಂದುವರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular