HomeCrimeಹಾಸ್ಟೆಲ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ ಮತ್ತು ಕೊಲೆ; ಶಂಕಿತ ಆರೋಪಿ ರೈಲ್ವೆ ಹಳಿ ಮೇಲೆ ಶವವಾಗಿ...

ಹಾಸ್ಟೆಲ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ ಮತ್ತು ಕೊಲೆ; ಶಂಕಿತ ಆರೋಪಿ ರೈಲ್ವೆ ಹಳಿ ಮೇಲೆ ಶವವಾಗಿ ಪತ್ತೆ

ದಕ್ಷಿಣ ಮುಂಬೈನಲ್ಲಿ 18 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ಆಕೆಯ ಹಾಸ್ಟೆಲ್ ಕೋಣೆಯಲ್ಲಿ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ಹೇಳಲಾದ ಬೆನ್ನಲ್ಲೇ, ಪ್ರಕರಣದ ಆರೋಪಿಯಾಗಿರುವ ಭದ್ರತಾ ಸಿಬ್ಬಂದಿ ಹಾಸ್ಟೆಲ್ ಬಳಿಯ ರೈಲ್ವೆ ಹಳಿಗಳ ಮೇಲೆ ಬುಧವಾರ ಶವವಾಗಿ ಪತ್ತೆಯಾಗಿದ್ದಾನೆ.

ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ಚಾರ್ನಿ ರಸ್ತೆಯ ನಾಲ್ಕನೇ ಮಹಡಿಯ ಹಾಸ್ಟೆಲ್ ಕೋಣೆಗೆ ಹೊರಗಿನಿಂದ ಬೀಗ ಹಾಕಿದ್ದು, ಯುವತಿ ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಿದಾಗ ಅತ್ಯಾಚಾರ ಘಟನೆ ಬೆಳಕಿಗೆ ಬಂದಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾಸ್ಟೆಲ್ ಕೋಣೆಗೆ ಪ್ರವೇಶಿಸಿದ ಪೊಲೀಸ್ ತಂಡವು ಆಕೆಯನ್ನು ಬಟ್ಟೆಯ ತುಂಡಿನಿಂದ ಕತ್ತು ಹಿಸುಕಿ ಸಾಯಿಸಿರುವುದನ್ನು ಕಂಡುಕೊಂಡಿತು. ಸಂತ್ರಸ್ತೆ ಬಾಂದ್ರಾದ ಉಪನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿನಿ.

ಸ್ಥಳಕ್ಕಾಗಮಿಸಿದ ಪೊಲೀಸರು ವಿಧಿವಿಜ್ಞಾನ ಮತ್ತು ಬೆರಳಚ್ಚು ತಜ್ಞರ ತಂಡದೊಂದಿಗೆ ಘಟನೆ ಕುರಿತು ತನಿಖೆ ಆರಂಭಿಸಿದರು. ಆದರೆ ತನಿಖೆಯ ವೇಳೆ ಹಾಸ್ಟೆಲ್‌ನ ಶಂಕಿತ ಭದ್ರತಾ ಸಿಬ್ಬಂದಿ ಚಾರ್ನಿ ರಸ್ತೆ ಬಳಿಯ ರೈಲ್ವೆ ಹಳಿಗಳ ಮೇಲೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ವಿದ್ಯಾರ್ಥಿಯ ಸೋದರ ಸಂಬಂಧಿಯ ದೂರು ಮತ್ತು ಸಾಂದರ್ಭಿಕ ಸಾಕ್ಷ್ಯಗಳ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಮತ್ತು 376 (ಅತ್ಯಾಚಾರ) ಅಡಿಯಲ್ಲಿ ಭದ್ರತಾ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣದ ಕುರಿತು ತನಿಖೆ ನಡೆಯುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular