HomeKarnatakaಕಾಡಾನೆ ದಾಳಿಗೆ ಮಹಿಳೆ ಬಲಿ: ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಖಂಡಿಸಿ ಇಂದು 3 ತಾಲೂಕು...

ಕಾಡಾನೆ ದಾಳಿಗೆ ಮಹಿಳೆ ಬಲಿ: ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಖಂಡಿಸಿ ಇಂದು 3 ತಾಲೂಕು ಬಂದ್

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಬಳ್ಳಾರಿಯ ಬೋರಮ್ಮ ಬಲಿಯಾಗಿದ್ದಾರೆ. ಶೃಂಗೇರಿ ಕ್ಷೇತ್ರದ ಹುಣಸೆಹಳ್ಳಿಯಲ್ಲಿ ಘಟನೆ ನಡೆದಿದೆ. ಒಂದೇ ವಾರದಲ್ಲಿ ಒಂದೇ ಸ್ಥಳದಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿಯಾಗಿದ್ದು, ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರೈತರು ಕಡಬಗೆರೆಯಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.

ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಬಾರದ ಹಿನ್ನೆಲೆಯಲ್ಲಿ ಪ್ರತಿಭಟನೆ ಮುಂದುವರೆದಿದ್ದು, ಮಹಿಳೆ ಸಾವಿಗೆ ಅರಣ್ಯ ಇಲಾಖೆಯೇ ಕಾರಣ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆನೆ ದಾಳಿಯಿಂದ ಸಾವನ್ನಪ್ಪಿರುವ ಘಟನೆ ವಿರೋಧಿಸಿ ಪ್ರತಿಭಟನೆ ನಡೆಸಿದ ರೈತರು ಮತ್ತು ಕಾರ್ಮಿಕರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು ಹೋರಾಟಗಾರರನ್ನು ಬಂಧಿಸಿದ್ದಾರೆ.

ಇದನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಮಲೆನಾಡು ನಾಗರೀಕರಕ್ಷಣ ಸಮಿತಿ ಶೃಂಗೇರಿ ಬಂದ್ ಗೆ ಕರೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ಮಲೆನಾಡು ನಾಗರಿಕರ ಕ್ಷಣ ವೇದಿಕೆ, ರೈತ ಸಂಘಟನೆಗಳು ಮೂರು ತಾಲೂಕುಗಳ ಬಂದ್ ಗೆ ಕರೆ ನೀಡಿವೆ. ಎನ್ಆರ್ ಪುರ, ಕೊಪ್ಪ, ಶೃಂಗೇರಿ ತಾಲೂಕುಗಳಲ್ಲಿ ಬಂದ್ ಗೆ ಕರೆ ನೀಡಲಾಗಿದೆ. ಎಲ್ಲಾ ರೈತರು ಸ್ವಯಂ ಪ್ರೇರಿತವಾಗಿ ಬಂದ್ ಗೆ ಬೆಂಬಲಿಸಿ, ವರ್ತಕರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ರೈತರ ಪರವಾಗಿ ನಿಲ್ಲುವಂತೆ ಕೋರಲಾಗಿದೆ. ಸೋಮವಾರ ಬಾಳೆಹೊನ್ನೂರು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗಿದೆ. ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು. ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular