BIG NEWS: ಮಹಿಳೆಯರ ನಾಪತ್ತೆ ಪ್ರಕರಣ: ಬೆಂಗಳೂರಿನಲ್ಲಿಯೇ ಅತಿ ಹೆಚ್ಚು ಕೇಸ್ ದಾಖಲು

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರ ನಾಪತ್ತೆ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೇ ಅತಿ ಹೆಚ್ಚು ಪ್ರಕರಣಗಳು ನಡೆದಿದೆ.

ಕಳೆದ 6 ತಿಂಗಳಲ್ಲಿ ರಾಜ್ಯದಲ್ಲಿ 7,550 ಮಹಿಳೆಯರು ನಾಪತ್ತೆಯಾಗಿದ್ದಾರೆ. ಅವರಲ್ಲಿ 5,855 ಮಹಿಳೆಯರನ್ನು ಪತ್ತೆ ಮಾಡಲಾಗಿದೆ. ಆದರೆ 1695 ಮಹಿಳೆಯರ ಬಗ್ಗೆ ಈವರೆಗೆ ಯಾವುದೇ ಸುಳಿವು ಸಿಕ್ಕಿಲ್ಲ. ಕಳೆದ ಮೂರು ವರ್ಷಗಳಲ್ಲಿ ಈ ವರ್ಷವೇ ಅತಿ ಹೆಚ್ಚು ಮಹಿಳೆಯರ ನಾಪತ್ತೆ ಪ್ರಕರಣ ದಾಖಲಾಗಿದೆ ಎಂದು ಗೃಹ ಇಲಾಖೆ ಮಾಹಿತಿ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ಅಂದರೆ 429 ಪ್ರಕರಣ ದಾಖಲಾಗಿದೆ. ಮೈಸೂರಿನಲ್ಲಿ 109 ಪ್ರಕರಣ ದಾಖಲಾಗಿದೆ. ಬೆಳಗಾಯಿ 87, ಶಿವಮೊಗ್ಗ 84, ತುಮಕೂರು 75, ವಿಜಯಪುರ 59 ರಾಮನಗರ 51, ಚಿತ್ರದುರ್ಗ 48, ಕೋಲಾರ 47, ದಾವಣಗೆರೆ 42 ಪ್ರಕರಣಗಳು ದಾಖಲಾಗಿವೆ.

ಕಳೆದ ಮೂರುವರೆ ವರ್ಷಗಳಲ್ಲಿ 42,237 ಮಹಿಳೆಯರ ನಾಪತ್ತೆ ಪ್ರಕರಣ ದಾಖಲಾಗಿದ್ದು, ಅವುಗಳಲ್ಲಿ 39,389 ಮಹಿಳೆಯರನ್ನು ಪತ್ತೆ ಮಡಲಾಗಿದೆ. ಉಳಿದ 2,848 ಮಹಿಳೆಯರ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಕೌಟುಂಬಿಕ ಕಲಹ, ಮನಸ್ತಾಪ, ಪ್ರೇಮ ಪ್ರಕರಣ, ಆರ್ಥಿಕ ಸ್ಥಿತಿ, ಸಾಮಾಜಿಕ ಜಾಲತಾಣಗಳಲ್ಲಿ ಪರಿಚಯ ಪ್ರಭಾವ, ಅಪಹರಣ, ಕಳ್ಳಸಾಗಣಿಕೆ ಮತ್ತಿತರ ಕಾರಣಗಳಿಂದಾಗಿ ಮಹಿಳೆಯರು ನಾಪತ್ತೆಯಾಗಿದ್ದಾಗಿ ಇಲಾಖೆ ತಿಳಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read