HomeIndiaವಿಮಾನ ನಿಲ್ದಾಣದಲ್ಲಿ ಅನುಚಿತವಾಗಿ ಮುಟ್ಟಿ ಮಹಿಳೆಗೆ ಕಿರುಕುಳ

ವಿಮಾನ ನಿಲ್ದಾಣದಲ್ಲಿ ಅನುಚಿತವಾಗಿ ಮುಟ್ಟಿ ಮಹಿಳೆಗೆ ಕಿರುಕುಳ

ಲೋಹೆಗಾಂವ್‌ ನ ಪುಣೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಏರ್‌ ಲೈನ್‌ ವಿಮಾನವನ್ನು ಪ್ರವೇಶಿಸುತ್ತಿದ್ದಾಗ 27 ವರ್ಷದ ಮಹಿಳೆಯೊಬ್ಬರಿಗೆ ಪ್ರಯಾಣಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಶುಕ್ರವಾರ ವಿಮಂತಲ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದೂರು ನೀಡಿದ ನಂತರ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಸಂತ್ರಸ್ತೆ ಅಕ್ಟೋಬರ್ 21 ರಂದು ಸಂಜೆ ಪುಣೆಯಿಂದ ಬೆಂಗಳೂರಿಗೆ ವಿಮಾನ ಹತ್ತುವಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆ ವಿಮಾನವನ್ನು ಪ್ರವೇಶಿಸಲು ಸುರಂಗದಲ್ಲಿ ಸರತಿ ಸಾಲಿನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಆಕೆಯ ಹಿಂದೆ ನಿಂತಿದ್ದ ಪ್ರಯಾಣಿಕರೊಬ್ಬರು ಅವಳನ್ನು ಅನುಚಿತವಾಗಿ ಹಿಂದಿನಿಂದ ಮುಟ್ಟಿ ಕಿರುಕುಳ ನೀಡಿದ್ದಾಗಿ ಆರೋಪಿಸಿದ್ದಾರೆ. ಘಟನೆ ಬಗ್ಗೆ ಮಹಿಳೆ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಮಂತಲ್ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಇನ್ಸ್‌ ಪೆಕ್ಟರ್ ಸಾಹೇಬ ಪೋಟೆ, ಸಂತ್ರಸ್ತ ಮಹಿಳೆ ಶುಕ್ರವಾರ ಪೊಲೀಸರನ್ನು ಸಂಪರ್ಕಿಸಿದ್ದು, ಎಫ್‌ಐಆರ್ ದಾಖಲಿಸಲಾಗಿದೆ. ತನಿಖೆಯನ್ನು ಪ್ರಾರಂಭಿಸಲಾಗಿದೆ. ಆರೋಪಿಯನ್ನು ಗುರುತಿಸಲಾಗಿದೆ. ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 354 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular