ದಾವಣಗೆರೆ: ಕತ್ತು ಕೊಯ್ದು ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗೊಲ್ಲರಹಟ್ಟಿಯಲ್ಲಿ ನಡೆದಿದೆ.
ಜ್ಯೋತಿ (35) ಕೊಲೆಯಾದ ಮಹಿಳೆ. ಗೊಲ್ಲರಹಟ್ಟಿ ಗ್ರಾಮದ ಮನೆಯಲ್ಲಿ ಮಹಿಳೆ ಶವವಾಗಿ ಪತ್ತೆಯಾಗಿದ್ದಾರೆ. ಕತ್ತು ಕೊಯ್ಡ ರೀತಿಯಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿದ್ದು, ಪತಿಯೇ ಪತ್ನಿಯನ್ನು ಕೊಲೆಗೈದು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಮಹಿಳೆಯ ಪತಿ ಬಸವರಾಜ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಗಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.