HomeKarnataka ಮಹಿಳಾ ಅಧಿಕಾರಿ ಮೇಲೆ ಅತ್ಯಾಚಾರ: ಉದ್ಯಮಿ ಅರೆಸ್ಟ್

 ಮಹಿಳಾ ಅಧಿಕಾರಿ ಮೇಲೆ ಅತ್ಯಾಚಾರ: ಉದ್ಯಮಿ ಅರೆಸ್ಟ್

ಬೆಂಗಳೂರು: ಮಹಿಳಾ ಅಧಿಕಾರಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಉದ್ಯಮಿಯನ್ನು ಪುಲಕೇಶಿನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ.

ಕಸ್ಟಮ್ಸ್ ಮಹಿಳಾ ಅಧೀಕ್ಷಕಿ ಮೇಲೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಉದ್ಯಮಿ ಕೃಷ್ಣಾನಿ ಅವರನ್ನು ಬಂಧಿಸಲಾಗಿದೆ. 45 ವರ್ಷದ ಮಹಿಳಾ ಅಧಿಕಾರಿ ನೀಡಿದ ದೂರಿನ ಅನ್ವಯ ಆರೋಪಿ ಎಂ. ಕೃಷ್ಣಾನಿ ಅವರನ್ನು ಬಂಧಿಸಿ ಕೋರ್ಟ್ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಮೂರು ದಿನ ಪೊಲೀಸ್ ಕಸ್ಟಡಿಗೆ ನೀಡಿತ್ತು. ಆರೋಪಿಯ ವಿಚಾರಣೆ ಮುಂದುವರೆದಿದೆ.

ಉದ್ಯಮಿ ಕೃಷ್ಣಾನಿ ನನ್ನ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ್ದಾನೆ ಎಂದು 2025 ಡಿಸೆಂಬರ್ ನಲ್ಲಿ ಯಲಹಂಕ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದೂರು ನೀಡಿದ್ದರು. ಇಂದಿರಾನಗರ ವ್ಯಾಪ್ತಿಯಲ್ಲಿ ಕೃತ್ಯ ನಡೆದಿದ್ದರಿಂದ ಪ್ರಕರಣದ ತನಿಖೆಯನ್ನು ಇಂದಿರಾನಗರ ಠಾಣೆಗೆ ವರ್ಗಾಯಿಸಲಾಗಿತ್ತು. ಹಿರಿಯ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ಪುಲಿಕೇಶಿ ನಗರ ಠಾಣೆಗೆ ವರ್ಗಾಯಿಸಿದ್ದು, ತನಿಖೆ ನಡೆಸಿ ಆರೋಪಿ ಬಂಧಿಸಲಾಗಿದೆ. ಸಂತ್ರಸ್ತೆ ಹೇಳಿಕೆ ದಾಖಲಿಸಿ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular