HomeLatest Newsರಸ್ತೆಯಲ್ಲಿ ಹಠಾತ್ ಅಡ್ಡ ಬಂದ ನಾಯಿ: ಸ್ಕೂಟರ್ ನಲ್ಲಿದ್ದ ಮಹಿಳೆ ಸಾವು

ರಸ್ತೆಯಲ್ಲಿ ಹಠಾತ್ ಅಡ್ಡ ಬಂದ ನಾಯಿ: ಸ್ಕೂಟರ್ ನಲ್ಲಿದ್ದ ಮಹಿಳೆ ಸಾವು

ಉಡುಪಿ: ರಸ್ತೆಯಲ್ಲಿ ಹಠಾತ್ ನಾಯಿ ಅಡ್ಡ ಬಂದ ಪರಿಣಾಮ ಸ್ಕೂಟರ್ ನಲ್ಲಿ ತೆರಳುತ್ತಿದ್ದ ಮಹಿಳೆ ಕೆಳಗೆ ಬಿದ್ದು ಗಾಯಗೊಂಡು ಮೃತಪಟ್ಟಿದ್ದಾರೆ.

ಬ್ರಹ್ಮಾವರ ಕಾಡೂರು ಗ್ರಾಮದ ದುರ್ಗಾಪರಮೇಶ್ವರಿ ದೇವಾಲಯದ ಬಳಿ ಘಟನೆ ನಡೆದಿದೆ. ನಾಯಿ ಅಡ್ಡ ಬಂದಿದ್ದರಿಂದ ಸ್ಕೂಟರ್ ಬ್ರೇಕ್ ಹಾಕಲಾಗಿದೆ. ಈ ವೇಳೆ ಹಿಂಬದಿ ಕುಳಿತಿದ್ದ ಸುಮತಿ ಶೆಟ್ಟಿ ಅವರು ರಸ್ತೆಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರ ಪತಿ ಕರುಣಾಕರ ಶೆಟ್ಟಿ ಸ್ಕೂಟರ್ ಚಾಲನೆ ಮಾಡುತ್ತಿದ್ದರು. ತಲೆಗೆ ಪೆಟ್ಟು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಸುಮತಿ ಅವರನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದೆ. ಆದರೆ ಈ ವೇಳೆಗಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular