HomeBusinessಸ್ತ್ರೀಶಕ್ತಿ ಸಂಘಗಳ ಮಹಿಳೆಯರಿಗೆ ಗುಡ್ ನ್ಯೂಸ್: ‘ಉದ್ಯಮ ಶಕ್ತಿ’ ಯೋಜನೆಯಡಿ ಪೆಟ್ರೋಲ್ ಬಂಕ್

ಸ್ತ್ರೀಶಕ್ತಿ ಸಂಘಗಳ ಮಹಿಳೆಯರಿಗೆ ಗುಡ್ ನ್ಯೂಸ್: ‘ಉದ್ಯಮ ಶಕ್ತಿ’ ಯೋಜನೆಯಡಿ ಪೆಟ್ರೋಲ್ ಬಂಕ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಸ್ವಸಹಾಯ ಸಂಘಗಳಿಗೆ ನೆರವಾಗಲು ಉದ್ಯಮ ಶಕ್ತಿ ಯೋಜನೆ ಜಾರಿಗೊಳಿಸುವುದಾಗಿ ಹೇಳಲಾಗಿದೆ.

ತೈಲ ಕಂಪನಿಗಳ ಸಹಾಯೋಗದಲ್ಲಿ ಉದ್ಯಮ ಶಕ್ತಿ ಯೋಜನೆ ಜಾರಿ ಮಾಡಲಿದ್ದು, ಸ್ತ್ರೀ ಸ್ವಸಹಾಯ ಸಂಘಗಳಿಗೆ ನೆರವಾಗಲು 100 ಪೆಟ್ರೋಲ್ ಬಂಕ್ ಗಳನ್ನು ಸ್ಥಾಪಿಸಲಾಗುವುದು. ಸರ್ಕಾರಿ ಸ್ವಾಮ್ಯದ ಪೆಟ್ರೋಲಿಯಂ ಕಂಪನಿಗಳ ಸಹಯೋಗದಲ್ಲಿ ರಾಜ್ಯ ಸರ್ಕಾರದಿಂದ ಉದ್ಯಮ ಶಕ್ತಿ ಯೋಜನೆ ಜಾರಿಗೊಳಿಸಲಿದ್ದು, 100 ಸ್ಥಳಗಳಲ್ಲಿ ಪೆಟ್ರೋಲ್ ಬಂಕ್ ಗಳನ್ನು ಸ್ಥಾಪಿಸುವುದಾಗಿ ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಿಳಾ ಸಹಕಾರಿ ಸ್ವಸಹಾಯ ಸಂಘಗಳ ಮೂಲಕ ಪೆಟ್ರೋಲ್ ಬಂಕ್ ಗಳನ್ನು ಸಂಪೂರ್ಣವಾಗಿ ನಿರ್ವಹಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ರಾಜ್ಯ ಸರ್ಕಾರ ಪೆಟ್ರೋಲ್ ಬಂಕ್ ಸ್ಥಾಪನೆಗೆ ಭೂಮಿ ಒದಗಿಸುವ ಜೊತೆಗೆ ತರಬೇತಿ ಪರವಾನಿಗೆ ಇತರೆ ಬೆಂಬಲ ನೀಡಲಿದೆ. ಪೆಟ್ರೋಲಿಯಂ ಕಂಪನಿಗಳು ಬಂಡವಾಳ ಹೂಡಲಿವೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular