HomeKarnatakaBREAKING NEWS: ಮಹಿಳೆಯೊಂದಿಗೆ ಪೊಲೀಸ್ ಕಾನ್ಸ್ ಟೇಬಲ್ ನೇಣಿಗೆ ಶರಣು

BREAKING NEWS: ಮಹಿಳೆಯೊಂದಿಗೆ ಪೊಲೀಸ್ ಕಾನ್ಸ್ ಟೇಬಲ್ ನೇಣಿಗೆ ಶರಣು

ಹುಬ್ಬಳ್ಳಿ: ಮಹಿಳೆಯೊಂದಿಗೆ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ನವನಗರದಲ್ಲಿ ನಡೆದಿದೆ.

ಮಹಿಳೆಯೊಂದಿಗೆ ಕಾನ್ಸ್ ಟೇಬಲ್ ಮಹೇಶ್ ಹೆಸರೂರು ನೇಣಿಗೆ ಶರಣಾಗಿದ್ದಾರೆ. ಮಹೇಶ್ ಹೆಸರೂರು ಧಾರವಾಡ ಸಂಚಾರಿ ಪೊಲೀಸ್ ಠಾಣೆ ಪಿಸಿಯಾಗಿದ್ದರು.

ಹುಬ್ಬಳ್ಳಿಯ ಗಾಮನಗಟ್ಟಿಯಲ್ಲಿರುವ ಮನೆಯೊಂದರಲ್ಲಿ ಘಟನೆ ನಡೆದಿದೆ. ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಎರಡು ಮೂರು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪಿಸಿ ಜೊತೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ವಿಜಯಲಕ್ಷ್ಮೀ ವಾಲಿ ಎಂದು ಗುರುತಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಬ್ಬರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular