ಮಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಮಂಗಳೂರಿನಲ್ಲಿ ಕಾನ್ಸ್ ಟೇಬಲ್ ನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಹೌದು. ಬೇಲಿಯೇ ಎದ್ದು ಹೊಲ ಮೇಯ್ದಂತೆ ಕಾನ್ಸ್ ಟೇಬಲ್ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ. ಬಂಧಿತನನ್ನು ಕಾನ್ಸ್ ಟೇಬಲ್ ಚಂದ್ರನಾಯಕ್ ಎಂದು ಗುರುತಿಸಲಾಗಿದೆ. ಮಂಗಳೂರಿನ ಕಂಕನಾಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
You Might Also Like
TAGGED:ಅತ್ಯಾಚಾರ