HomeLatest NewsBREAKING: ಹುಬ್ಬಳ್ಳಿಯಲ್ಲಿ ಮಹಿಳೆಯ ಮೇಲೆ ಅತ್ಯಾಚಾರ: ಕೃತ್ಯದ ವಿಡಿಯೋ ಹರಿಬಿಟ್ಟು ಬ್ಲ್ಯಾಕ್ ಮೇಲ್; ಕಾಮುಕರು ಅರೆಸ್ಟ್

BREAKING: ಹುಬ್ಬಳ್ಳಿಯಲ್ಲಿ ಮಹಿಳೆಯ ಮೇಲೆ ಅತ್ಯಾಚಾರ: ಕೃತ್ಯದ ವಿಡಿಯೋ ಹರಿಬಿಟ್ಟು ಬ್ಲ್ಯಾಕ್ ಮೇಲ್; ಕಾಮುಕರು ಅರೆಸ್ಟ್

ಹುಬ್ಬಳ್ಳಿ: ರಾಜ್ಯದ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮಹಿಳೆಯ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರವೆಸಗಿ ಕೃತ್ಯದ ವಿಡಿಯೋ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ.

ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮಹಿಳೆಯ ಮೇಲೆ ಇಬ್ಬರು ಕಾಮುಕರು ಅತ್ಯಾಚಾರವೆಸಗಿದ್ದಾರೆ. ಕೃತ್ಯದ ವಿಡಿಯೋಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡಿದ್ದೂ ಅಲ್ಲದೇ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟು ವಿಕೃತಿ ಮೆರೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಿಳೆಗೆ ಪದೇ ಪದೇ ಬ್ಲ್ಯಾಕ್ ಮೇಲ್ ಮಾಡಿ ಬೆದರಿಕೆಯೊಡ್ದಿದ್ದಲ್ಲದೇ, ವಿಡಿಯೋ ವೈರಲ್ ಮಾಡಿದ್ದು, ಸಂತ್ರಸ್ತ ಮಹಿಳೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಇಬ್ಬರು ಕಾಮುಕರನ್ನು ಪೊಲೀಸರು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular