ಚಾಮರಾಜನಗರ: ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಜಮೀನು ವಶಪಡಿಸಿಕೊಂಡಿದ್ದಕ್ಕೆ ಮನನೊಂದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ರಾಜಮ್ಮ (52) ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ. ಹನೂರು ತಾಲೂಕಿನ ದೊಡ್ಡಾಲತ್ತೂರಿನಲ್ಲಿ ಈ ದುರಂತ ಸಂಭವಿಸಿದೆ. ರಾಜಮ್ಮ ಅವರಿಗೆ ಪಿತ್ರಾರ್ಜಿತವಗೈ 90 ಸೆಂಟ್ಸ್ ಭೂಮಿ ಬಂದಿತ್ತು. ಇದ್ದ ಚೂರುಪಾರು ಭೂಮಿಯಲ್ಲಿ ಕುಟುಂಬ ವ್ಯವಸಾಯ ಮಾಡಿಕೊಂಡಿತ್ತು. ಕಳೆದ ವಾರ ಏಕಾಏಕಿ ಬಂದ ಕಂದಾಯ ಇಲಕಹೆ ಅಧಿಕಾರಿಗಳು 20 ಸೆಂಟ್ಸ್ ಭೂಮಿಯನ್ನು ವಶಕ್ಕೆ ಪಡೆದಿದ್ದರು. ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಜಮೀನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದರು. ಇರುವ ಸ್ವಲ್ಪ ಭೂಮಿಯನ್ನೂ ಕಂದಾಯ ಇಲಾಖೆ ವಶಪಡಿಸಿಕೊಂಡ ಬೆನ್ನಲ್ಲೇ ತೀವ್ರವಾಗಿ ನೊಂದಿದ್ದ ರಾಜಮ್ಮ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಾಜಮ್ಮನ ಶವ ಇಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.