ಬೆಳಗಾವಿ: ಇಸ್ಲಾಂ ಧರ್ಮಕ್ಕೆ ಮತಾಂತರವಾಗದಿದ್ದರೆ ಹತ್ಯೆ ಮಾಡುವುದಾಗಿ ಬೆದರಿಕೆಯೊಡ್ದಿ ಕಿರುಕುಳ ನೀಡಿದ್ದಕ್ಕೆ ಮನನೊಂದ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ನಡೆದಿದೆ.
ರಾಮದುರ್ಗ ತಾಲೂಕಿನ ಗೋಣಗನೂರಿನಲ್ಲಿ ನಡೆದಿದೆ. ಅನ್ಯಕೋಮಿನ ವ್ಯಕ್ತಿಯೊಂದಿಗೆ ಮಹಿಳೆ ಅನೈತಿಕ ಸಂಬಂಧ ಹೊಂದಿದ್ದರು. ಆತ ಇಸ್ಲಾಂ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಾಯಿಸುತ್ತಿದ್ದ. ಅಲ್ಲದೇ ಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಕಿರುಕುಳಕ್ಕೆ ಬೇಸತ್ತ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ನಾಗವ್ವ ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ. ಮುಕ್ತಮಸಾಬ್ ಮಹಿಳೆಗೆ ಕಿರುಕುಳ ನೀಡಿ ಬೆದರಿಕೆ ಹಾಕಿದ್ದ ಆರೋಪಿ. ಮುಕ್ತಮಸಾಬ್ ಜೊತೆ ಮಹಿಳೆ ನಾಗವ್ವ ಅನೈತಿಕ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಆತ ಇಸ್ಲಾಂಗೆ ಮತಾಂತರವಾಗುವಂತೆ ಒತ್ತಾಯಿಸಿ ಹಿಂಸಿಸಿದ್ದನಂತೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಮುಕ್ತಮಸಾಬ್ ನನ್ನು ಬಂಧಿಸಿದ್ದಾರೆ.
