HomeKarnatakaBIG NEWS: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಮಹಿಳೆ

BIG NEWS: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಮಹಿಳೆ

ಹಾಸನ: ಮಹಿಳೆಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಿಕ್ಕೋಡು ಗ್ರಾಮದಲ್ಲಿ ನಡೆದಿದೆ.

ಜಮುನಾ (44) ಮೃತ ಮಹಿಳೆ. 10 ಲಕ್ಷ ರೂಪಾಯಿ ಸಾಲದ ಶ್ಯೂರಿಟಿಗೆ ಸಹಿ ಹಾಕುವಂತೆ ನಂದೀಶ್ ಹಾಗೂ ಧನುಶ್ರೀ ದಂಪತಿ ಜಮುನಾರನ್ನು ಪದೇ ಪದೇ ಒತ್ತಾಯಿಸುತ್ತಿದ್ದರಂತೆ. ಇದಕ್ಕೆ ಒಪ್ಪದಿದ್ದಾದ ಜಮುನಾ ಅವರ ಮಗನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರಂತೆ. ಇದರಿಂದ ಮನನೊಂದ ಜಮುನಾ ಡೆತ್ ನೋಟ್ ಬರೆದಿಟ್ಟು, ದಂಪತಿ ಹೆಸರು ಉಲ್ಲೇಖಿಸಿ ವಿಷ ಸೇವಿಸಿ ಸಾವಿಗೆ ಶರಣಾಗಿದ್ದಾರೆ.

ಮೃತ ಜಮುನಾ ಪುತ್ರ ಸಾತ್ವಿಕ್ ಪೊಲೀಸರುಗೆ ದೂರು ನೀಡಿದ್ದಾರೆ. ಘಟನಾ ಸ್ಥಳಕ್ಕೆ ಅರೇಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular