HomeKarnatakaBIG NEWS: ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಜಿಗಿದು ಬಾಣಂತಿ ಆತ್ಮಹತ್ಯೆ

BIG NEWS: ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಜಿಗಿದು ಬಾಣಂತಿ ಆತ್ಮಹತ್ಯೆ

ಮಂಗಳೂರು: ಆಸ್ಪತ್ರೆಯ ಕಟ್ಟಡದಿಂದ ಜಿಗಿದು ಬಾಣಂತಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನ ಲೇಡಿಗೋಷನ್ ಹೆರಿಗೆ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಕಾರ್ಕಳದ ರಂಜಿತಾ ಆಚಾರ್ಯ (28) ಆತ್ಮಹತ್ಯೆಗೆ ಶರಣಾದವರು.

ರಂಜಿತಾ ಅವರಿಗೆ ಅವಧಿಪೂರ್ವ ಪ್ರಸವವಾಗಿತ್ತು. ಅ.30ರಂದು ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಎನ್ ಐಸಿಯುವಿನಲ್ಲಿ ಆರೈಕೆಯಲ್ಲಿದ್ದ ಶಿಶು ನ.3ರಂದು ಮೃತಪಟ್ಟಿತ್ತು. ಇಂದು ರಂಜಿತಾ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಬೇಕಾಗಿತ್ತು. ಆದರೆ ಅಷ್ಟರಲ್ಲಿಯೇ ರಂಜಿತಾ ಆಸ್ಪತ್ರೆಯ ಕಟ್ಟಡದಿಂದ ಜಿಗಿದು ಸಾವಿಗೆ ಶರಣಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಂಜಿತಾ ಡಿಸ್ಚಾರ್ಜ್ ಆಗಬೇಕಿದ್ದ ಹಿನ್ನೆಲೆಯಲ್ಲಿ ಕುಟುಂಬದವರು ಅವರನ್ನು ಕರೆದೊಯ್ಯಲು ಆಸ್ಪತ್ರೆಗೆ ಬಂದಿದ್ದರು. ಈ ವೇಳೆ ರಂಜಿತಾ ಏಕಏಕಿ ನಾಲ್ಕನೇ ಮಹಡಿಗೆ ಹೋಗಿ ಕಟ್ಟಡದಿಂದ ಜಿಗಿದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಹೆಚ್.ಆರ್.ತಿಮ್ಮಯ್ಯ ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular